ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಪ್ರವಾಸಿಗರಿದ್ದ ಮಿನಿ ಬಸ್ ಮೇಲೆ ಮರ ಬಿದ್ದು ಪ್ರವಾಸಿಗರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಲೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಸುಂಕಸಾಲೆ ಬಳಿ ನಡೆದಿದೆ.
ಇದನ್ನೂ ಓದಿ: ಅನಧಿಕೃತ ಕಟ್ಟಡ ಕಟ್ಟಿದ್ದವರಿಗೆ ಬಿಗ್ ಶಾಕ್; ಯಾಕೆ ಗೊತ್ತಾ? ಇಲ್ಲಿದೆ ನೋಡಿ

ಠಾಣಿಝರಿ ಪ್ರವಾಸಕ್ಕೆ ತೆರಳಿ ವಾಪಸ್ ಆಗುವಾಗ ಧಾರಾಕಾರ ಮಳೆಯಿಂದ ಸುಂಕಸಾಲೆ ಬಳಿ ಮಿನಿ ಬಸ್ ಮೇಲೆ ಮರ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ ಮೂವರು ಪ್ರವಾಸಿಗರಿಗೆ ಗಂಭೀರ ಗಾಯವಾಗಿದ್ದು, ಬಸ್ ಮುಂಭಾಗ ಸಂಪೂರ್ಣ ಜಖಂವಾಗಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಅವಕಾಶ
ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕೊಟ್ಟಿಗೆಹಾರ ಹಾಗೂ ಕಳಸ ಸಂಚಾರ ಅಸ್ತವ್ಯಸ್ತವಾಗಿದೆ. ಇನ್ನು ಈ ಘಟನೆ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: ಚಾಕೋಲೆಟ್ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಚಾಕೋಲೆಟ್ ನಲ್ಲಿ ಆಲ್ಕೋಹಾಲ್ ಅಂಶ ಪತ್ತೆ












