ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಕೋಗಿಲೆ ಗ್ರಾಮದ ಸಮೀಪವಿರುವ ಪ್ಲಾಂಟೇಶನ್ ಬಳಿ ನಡೆದಿದೆ.
ಇದನ್ನೂ ಓದಿ; SSLC ಪಾಸ್ ಆದವರಿಗೆ ಗುಡ್ ನ್ಯೂಸ್; SSC GD ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ

ಖಚಿತ ಮಾಹಿತಿಯೊಂದಿಗೆ ಬಾನುವಾರ ಬಣಕಲ್ ಸಬ್ ಇನ್ಸ್ಪೆಕ್ಟರ್ ರೇಣುಕಾ ಸಾರಥ್ಯದಲ್ಲಿ ಪೊಲೀಸರ ತಂಡದೊಂದಿಗೆ ಇಸ್ಪೀಟ್ ಆಟ ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ್ದು, ಹಣದೊಂದಿಗೆ ಒಟ್ಟು 7 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಜಗದೀಶ್, ಕಿರಣ್, ಮೆಹಬೂಬ್, ಮಾಲತೇಶ್, ಅಶೋಕ್, ಸಚ್ಚಿನ್, ದಿಲೀಪ್ ಇದ್ದರು. (ವರದಿ- ತನು ಕೊಟ್ಟಿಗೆಹಾರ)
ಚಿಕ್ಕಮಗಳೂರು: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಅಭಿಷೇಕ್ (27) ಮೃತ ಯುವಕ.
ಮೃತ ಅಭಿಷೇಕ್ ಗೆ ಮೂರು ಎಕರೆ ಅಡಿಕೆ ತೋಟವಿದ್ದು, ಅದೇ ತೋಟದಲ್ಲಿ ತೆಂಗಿನ ಮರಗಳು ಕೂಡ ಇದ್ದವು. ನ.26ರ ಭಾನುವಾರ ಸಂಜೆ ತೋಟದಲ್ಲಿ ತೆಂಗಿನಕಾಯಿ ಕೀಳಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ತೋಟದಲ್ಲಿ ಒಂದು ಮರದಿಂದ ಮತ್ತೊಂದು ತೆಂಗಿನ ಮರದ ಬಳಿ ಹೋಗುವಾಗ ಅಲ್ಯುಮಿನಿಯಂ ಏಣಿ ಎತ್ತಿಕೊಂಡು ಹೋಗುವಾಗ ಪ್ರೈಮರಿ ಲೈನ್ (11 ಸಾವಿರ ಕಿಲೋವ್ಯಾಟ್) ವಿದ್ಯುತ್ ತಂತಿಗೆ ಏಣಿ ತಗುಲಿ ಸಾವನ್ನಪ್ಪಿದ್ದಾನೆ. ವಿದ್ಯುತ್ ಶಾಕ್ ನಿಂದ ತೋಟದಲ್ಲೇ ಬಿದ್ದಿದ್ದ ಅಭಿಷೇಕ್ ನನ್ನು ಕೂಡಲೇ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರೂ ಕೂಡ ತೀವ್ರವಾದ ವಿದ್ಯುತ್ ಶಾಕ್ ನಿಂದ ಅಭಿಷೇಕ್ ಅಸುನೀಗಿದ್ದಾನೆ.
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












