ಮೂಡಿಗೆರೆ: ಖಾರದ ಪುಡಿ ಎರಚಿ ಹಣ, ಚಿನ್ನ ದರೋಡೆ : ಆರೋಪಿಗಳು ಅಂದರ್

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾಲೀಕರ ಕಣ್ಣಿಗೆ ಖಾರದ ಪುಡಿ ಎರಚಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿರುವ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಅನ್ಸರ್, ಖಲಂದರ್, ಶೈನಿಂಗ್ ಕುಮಾರ್, ಆಶ್ರಫ್, ಉಮೇಶ್ ಬಂಧಿತ ಆರೋಪಿಗಳು.

 

ಇದನ್ನೂ ಓದಿ; ನರೇಗಾ ಕಾರ್ಮಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್

ಏನಿದು ಘಟನೆ?;
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಳಿಗನಾಡು ಸಮೀಪದ ಹೆಬ್ಬಾರಟ್ಟಿ ಗ್ರಾಮದಲ್ಲಿ 15/02/2024 ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಅನಂತರಾಮ್ ಹೆಬ್ಬಾರ್ ಎಂಬವರ ಮನೆಗೆ ನುಗ್ಗಿದ ನಾಲ್ವರು ಯುವಕರು ಮಾರಕಾಸ್ತ್ರಗಳನ್ನು ತೋರಿಸಿ ಹಣ ನೀಡುವಂತೆ ಬೆದರಿಸಿದ್ದಾರೆ. ಬಳಿಕ ಮನೆಯಲ್ಲಿದ್ದ 5 ಲಕ್ಷ ರೂ. ಹಾಗೂ ಮಹಿಳೆಯ ಕೊರಳಲ್ಲಿದ್ದ 30 ಗ್ರಾಂ ತೂಕದ ಮಾಂಗಲ್ಯ ಸರ ದೋಚಿದ್ದಾರೆ. ಈ ವೇಳೆ ಮನೆ ಮಾಲೀಕರನ್ನು ಬಿಡಿಸಲು ಬಂದ ಕೆಲಸಗಾರ ಮಾಣಿಭಟ್ಟ ಎಂಬವರ ಕೈಯನ್ನು ದರೋಡೆಕೋರರು ಕಡಿದಿದ್ದಾರೆ. ಇತ್ತ ಮನೆಯವರು ಕೂಗಾಡುತ್ತಿದ್ದಂತೆ ಅಕ್ಕಪಕ್ಕದ ತೋಟಗಳಲ್ಲಿದ್ದ ಕಾರ್ಮಿಕರು ಮನೆ ಬಳಿ ಆಗಮಿಸುವಷ್ಟರಲ್ಲಿ ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ. ಆದರೆ ಬಂದಿದ್ದ ನಾಲ್ವರು ಆರೋಪಿಗಳಲ್ಲಿ ಮೂವರು ಓಡಿ ಹೋಗಿದ್ದು, ಓರ್ವ ಆರೋಪಿ ಅರಮನೆ ತಲಗೂರು ಎಂಬ ಗ್ರಾಮದ ಸಮೀಪ ಅರಣ್ಯ ಪ್ರದೇಶದಲ್ಲಿ ಅವಿತು ಕುಳಿತಿದ್ದನ್ನು ಆತನನ್ನು ಹಿಂಬಾಲಿಸಿದ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಇದನ್ನೂ ಓದಿ; ಗ್ಯಾರಂಟಿ ಯೋಜನೆಯ ಹಣ ಬಂದಿಲ್ವಾ..?; ಹಾಗಾದ್ರೆ ಇಲ್ಲಿದೆ ಗುಡ್ ನ್ಯೂಸ್

ಪ್ರಕರಣದ ಗಂಭೀರತೆಯನ್ನು ಅರಿತ ಚಿಕ್ಕಮಗಳೂರು ಪೊಲೀಸ್ ಅಧೀಕ್ಷಕರಾದ ವಿಕ್ರಂ ಆಮಟೆ ಸೂಚನೆ ಮೇರೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಯೋಗೇಂದ್ರನಾಥ್ ಮತ್ತು ಕೃಷ್ಣಮೂರ್ತಿ ಹಾಗೂ ಶೈಲೇಂದ್ರ ಹೆಚ್.ಎಂ, ಯೋಗೇಂದ್ರನಾಥ್ ರವರ ಮಾರ್ಗದರ್ಶನದಲ್ಲಿ, ಮೂಡಿಗೆರೆ ಪೊಲೀಸ್ ವೃತ್ತ ನಿರೀಕ್ಷಕರು ಸೋಮೇಗೌಡ ಪಿ.ಪಿ ರವರ ನೇತೃತ್ವದಲ್ಲಿ, ದಿಲೀಪ್ ಕುಮಾರ್ ಪಿ.ಎಸ್.ಐ ಬಾಳೂರು, ಶ್ರೀನಾಥ್ ರೆಡ್ಡಿ, ಹರ್ಷವರ್ಧನ್ ಗೋಣಿಬೀಡುರವರೊಂದಿಗೆ ಮೂಡಿಗೆರೆ ವೃತ್ತ ಕಚೇರಿಯ ಸಿ.ಟಿ.ರಮೇಶ್, ಗಿರೀಶ್ ಬಿ.ಸಿ, ಬಾಳೂರು ಠಾಣಾ ಸಿಬ್ಬಂದಿಗಳಾದ ಎ.ಎಸ್.ಐ ವಿಶ್ವನಾಥ್, ನಂದೀಶ್, ರಾಜೇಂದ್ರ, ವಸಂತ್, ಓಂಕಾರನಾಯ್ಕ, ಸತೀಶ್, ಮಹೇಶ್, ಅನಿಲ್, ಮನು ರವರುಗಳ ಪ್ರತ್ಯೇಕ ತಂಡಗಳನ್ನು ರಚಿಸಿ ದರೋಡೆ ಕೃತ್ಯದಲ್ಲಿ ಭಾಗಿಯಾಗಿದ್ದ ಅನ್ಸರ್, ಖಲಂದರ್, ಶೈನಿಂಗ್ ಕುಮಾರ್, ಆಶ್ರಫ್, ಉಮೇಶ್ ರವರುಗಳನ್ನು ಪತ್ತೆಹಚ್ಚಿ ಬಂಧಿದಿದ್ದಾರೆ.

 

ಜಯಪುರ: ಕಾಡು ಪ್ರಾಣಿಯ ಮಾಂಸ ಶೇಖರಣೆ : ಆರೋಪಿಗಳ ಬಂಧನ

ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಕಾಡು ಪ್ರಾಣಿಯ ಮಾಂಸ ಶೇಖರಣೆ ಮಾಡಿಟ್ಟಿದ್ದ ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದ ಎಲೆಮಡಲು ಗ್ರಾಮದಲ್ಲಿ ನಡೆದಿದೆ. ವಿಜೇಂದ್ರ ನಾಯ್ಕ(44), ವಿಶ್ವನಾಥ(37) ಬಂಧಿತ ಆರೋಪಿಗಳು.

ಇದನ್ನೂ ಓದಿ;  ರೈತರೇ ಗಮನಿಸಿ; ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ; ಯಾವುದೆಲ್ಲಾ ಸೌಲಭ್ಯ, ಎಲ್ಲಿ ಅರ್ಜಿ ಸಲ್ಲಿಕೆ?

ಎಲೆಮಡಲು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದ ಕಾಡುಕುರಿಯ ಮಾಂಸವನ್ನು ತಯಾರಿಸಿ, ಮನೆಯಲ್ಲಿ ಶೇಖರಣೆ ಮಾಡಿರುವುದರ ಹಿನ್ನೆಲೆ ಆರೋಪಿಗಳಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳಿಂದ 1.055 ಕೆ.ಜಿ ಕಾಡುಕುರಿಯ ಮಾಂಸವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಇದನ್ನೂ ಓದಿ; ಸೇನೆ ಸೇರಲು ಆಸಕ್ತ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ, ಆಯ್ಕೆ ವಿಧಾನ ಹೇಗೆ?

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.