ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತರುವೆ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ; ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ

ಚಾರ್ಮಾಡಿ ಮಾರ್ಗವಾಗಿ ಬಣಕಲ್ ಕಡೆಗೆ ಬರುತ್ತಿದ್ದ ವ್ಯಕ್ತಿಯನ್ನು PSI ಬಣಕಲ್ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳು ತರುವೆ ಗ್ರಾಮದಲ್ಲಿ ವಶಕ್ಕೆ ಪಡೆದುಕೊಂಡು, ಆರೋಪಿಯಿಂದ 85 ಗ್ರಾಂ ಗಾಂಜಾ ಮತ್ತು ಬೈಕ್ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ; ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
ಭದ್ರಾ ನದಿ ತೀರದಲ್ಲಿ ವಾಮಾಚಾರ | ಐದಾರು ಕುರಿ-ಮೇಕೆಗಳ ಬಲಿ ಕೊಟ್ಟಿರುವ ಕಿಡಿಗೇಡಿಗಳು
ಕಳಸ: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಬಳಿ ಬೃಹತ್ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ವಾಮಾಚಾರಕ್ಕೆ ಕಪ್ಪು ಬಣ್ಣದ ಕುರಿ, ಮೇಕೆಗಳನ್ನು ಬಲಿ ಕೊಡಲಾಗಿದೆ. ನದಿಯಲ್ಲಿ ರುಂಡ-ಮುಂಡ ಬೇರ್ಪಟ್ಟ ಕುರಿ-ಮೇಕೆ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಹೊರನಾಡಿಗೆ ಹೋಗುವ ಮುಖ್ಯರಸ್ತೆ ಬಳಿಯೇ ಈ ಕೃತ್ಯ ನಡೆದಿದ್ದು, ವಾಮಾಚಾರಕ್ಕೆ ಬಳಸಿದ್ದ ಕೂದಲು, ಉಗುರು, ಮಣ್ಣಿನ ಬೊಂಬೆಗಳು, ರಕ್ತ ನದಿ ದಡದಲ್ಲಿ ಪತ್ತೆಯಾಗಿವೆ ಹಾಗೂ ಭದ್ರಾ ನದಿಯಲ್ಲಿ 5-6 ಕುರಿ- ಮೇಕೆಗಳ ಶವ ಕೂಡಾ ಪತ್ತೆಯಾಗಿದೆ.
ರಾತ್ರಿ ವೇಳೆ ನಡೆದಿರುವ ವಾಮಾಚಾರದಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ವಾಮಾಚಾರದ ರಹಸ್ಯ ಭೇದಿಸಲು ಪೊಲೀಸರು ಮುಂದಾಗಿದ್ದು, ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ನದಿಯಿಂದ ಮೇಕೆ-ಕುರಿಗಳ ಶವ ಹೊರಕ್ಕೆ ತೆಗೆದಿದ್ದಾರೆ.












