ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದ ಹ್ಯಾಂಡ್ ಪೋಸ್ಟ್ ವೃತ್ತದ ಬಳಿ ಓಮಿನಿ ಕಾರೊಂದು ಲಾರಿ ಮತ್ತು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ: ರೇಷನ್ ಕಾರ್ಡ್ ಕುರಿತು ಆಹಾರ ಇಲಾಖೆಯಿಂದ ಬಿಗ್ ಅಪ್ಡೇಟ್; ಪಡಿತರ ಚೀಟಿ ಹೊಂದಿರುವವರು ಓದಲೇ ಬೇಕಾದ ಸುದ್ದಿ ಇಲ್ಲಿದೆ ನೋಡಿ

ಕಿರಿದಾದ ರಸ್ತೆಯಲ್ಲಿ ವೇಗವಾಗಿ ಬಂದ ಓಮಿನಿ ಕಾರು, ಬೈಕಿಗೆ ಡಿಕ್ಕಿ ಹೊಡೆದು ಬಳಿಕ ಲಾರಿಗೆ ಗುದ್ದಿದೆ. ಪರಿಣಾಮ ಬೈಕಿನ ಹಿಂಬದಿಯಲ್ಲಿ ಕುಳಿತ್ತಿದ್ದ ಮಹಿಳೆಯೋರ್ವರಿಗೆ ಹಾಗೂ ಓಮಿನಿ ಚಾಲಕನಿಗೆ ಗಂಭೀರ ಗಾಯವಾಗಿದೆ. ಬೈಕ್ ಚಾಲನೆ ಮಾಡುತ್ತಿದ್ದ ವ್ಯಕ್ತಿ ಹಾಗೂ ಓಮಿನಿ ಚಾಲಕನ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಬಿಯರ್ ದರ ಮತ್ತೆ ಹೆಚ್ಚಳ; ಬೆಲೆ ಎಷ್ಟಾಗಿದೆ ನೋಡಿ!
ಇನ್ನು ಈ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್ ಮಾಡಿ…












