ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಮೇಯುತ್ತಿದ್ದ ಕುರಿಗಳನ್ನು ಕಳ್ಳತನ ಮಾಡಿ ಅಪರಿಹರಿಸಿದ ಘಟನೆ ಮಂಗಳವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಅತ್ತಿಗೆರೆ ಬಳಿ ನಡೆದಿದೆ.
ಇದನ್ನೂ ಓದಿ; ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ

ಶಿವಮೊಗ್ಗ ಮೂಲದ ಭದ್ರಾವತಿಯ ಜಬೀವುಲ್ಲಾ ಮತ್ತು ಕುಟುಂಬದವರು ಕಾರಿನಲ್ಲಿ ಕೊಟ್ಟಿಗೆಹಾರದ ಅತ್ತಿಗೆರೆ ಸಮೀಪ ಮೇಯುತ್ತಿದ್ದ ಮೊಹಮ್ಮದ್ ಎಂಬುವವರ 5 ಕುರಿಗಳನ್ನು ಕಾರಿನಲ್ಲಿ ತುಂಬಿದಾಗ ಸ್ಥಳೀಯರೊಬ್ಬರು ಕುರಿ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಸ್ಥಳೀಯರು ಜಮಾಯಿಸಿ ಆರೋಪಿ ಜಬೀವುಲ್ಲಾನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ; ಸ್ವಂತ ಕೃಷಿ ಭೂಮಿ ಹೊಂದಿರೋ ರೈತರಿಗೆ ಗುಡ್ ನ್ಯೂಸ್; ಸರ್ಕಾರದಿಂದ ಸಿಗುತ್ತೆ 25,000 ಹಣ! ಈಗಲೇ ಅರ್ಜಿ ಸಲ್ಲಿಸಿ
ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣಾ ಸಬ್ ಇನ್ ಸ್ಪೆಕ್ಟರ್ ಕೌಶಿಕ್, ಪೊಲೀಸ್ ಸಿಬ್ಬಂದಿ ಜಗದೀಶ್ ಮತ್ತಿತರ ಸಿಬ್ಬಂದಿಗಳು ಭೇಟಿ ನೀಡಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಆಲ್ದೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 90 ಗ್ರಾಂ ಚಿನ್ನದ ಉಂಗುರಗಳು ಸೀಜ್
ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಲೋಕಸಭೆ ಚುನಾವಣೆಗೆ 2024 ದಿನಾಂಕ ಘೋಷಣೆ ಹಿನ್ನೆಲೆ ಇಡೀ ದೇಶಾದ್ಯಂತ ನೀತೆ ಸಂಹಿತೆ ಜಾರಿಯಾಗಿದ್ದು, ಅಲ್ಲಲ್ಲಿ ಚೆಕ್ ಪೋಸ್ಟ್ ಗಳನ್ನು ಹಾಕಿರುವ ಪೊಲೀಸರು ಮತ್ತು ಚುನಾವಣಾಧಿಕಾರಿಗಳು, ಚುನಾವಣಾ ಅಕ್ರಮಗಳನ್ನು ತಡೆಯಲು ಹದ್ದಿನ ಕಣ್ಣಿಟ್ಟಿದ್ದಾರೆ. ಇಂದು ಆಲ್ದೂರಿನ ವಸ್ತಾರೆ ಜಂಕ್ಷನ್ ಬಳಿ ದಾಖಲೆ ಇಲ್ಲದೆ ಬಲೆನೋ ವಾಹನದಲ್ಲಿ ಸಾಗಿಸುತ್ತಿದ್ದ 90 ಗ್ರಾಂ ಮೌಲ್ಯದ 18 ಚಿನ್ನದ ಉಂಗುರಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ವಾ?; ಹೆಸರು ನೋಂದಣಿಗೆ ಅವಕಾಶ
ಚಿನ್ನದ ವ್ಯಾಪಾರಿ ಒಬ್ಬರು ಗಟ್ಟಿ ಖರೀದಿಸಿ ಅದರಿಂದ ಉಂಗುರಗಳನ್ನು ತಯಾರಿಸಿ ಉಡುಪಿಯ ಜ್ಯುವೆಲರಿ ಅಂಗಡಿ ಮಾಲೀಕರಿಗೆ ನೀಡಲು ತೆರಳುತ್ತಿದ್ದರು ಎನ್ನಲಾಗಿದ್ದು, ತಪಾಸಣೆ ನಡೆಸಿದ ಪೊಲೀಸರು ಚಿನ್ನದ ಉಂಗುರವನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ; ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ; ಎರಡು ತಿಂಗಳ ಹಣ ಬರದೇ ಇದ್ರೆ ತಕ್ಷಣ ಈ ಕೆಲಸ ಮಾಡಿ!












