ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನ 7ನೇ ತಿರುವಿನಲ್ಲಿ ಚಾಲಕ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪ್ರಪಾತಕ್ಕೆ ಬಿದ್ದಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆ; sslc, puc ಪಾಸ್ ಆದವರಿಗೆ ಆಯೋಜನೆ; 15 ರಿಂದ 30 ಸಾವಿರ ಸಂಬಳ

ಚಿಕ್ಕಮಗಳೂರಿನಿಂದ ಧರ್ಮಸ್ಥಳ ಕಡೆಗೆ ಮೆಣಸಿನಕಾಯಿ ತುಂಬಿಕೊಂಡು ತೆರಳುತ್ತಿದ್ದ ಟಾಟಾ ಏಸ್ ವಾಹನವು ಚಾಲಕ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ತರೀಕೆರೆ: ಬಟ್ಟೆ ತೊಳೆಯಲು ಹೋಗಿದ್ದ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪ್ರೀತಿಸಿ ವಿವಾಹವಾಗಿ ದೂರವಾಗಿದ್ದ ಪತ್ನಿಯನ್ನು ಪತಿಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ. ಕರಕುಚ್ಚಿ ಗ್ರಾಮದ ಮೇಘಾ(20) ಮೃತ ಪತ್ನಿ, ಚರಣ್ ಹತ್ಯೆಗೈದ ಪತಿ.
ಇದನ್ನೂ ಓದಿ: ಮೇ 1 ರಿಂದ ದೇಶಾದ್ಯಂತ ಹೊಸ ರೂಲ್ಸ್ ಜಾರಿ!; ಈ ಎಲ್ಲಾ ನಿಯಮಗಳಲ್ಲಿ ಬದಲಾವಣೆ; ಇಲ್ಲಿದೆ ನೋಡಿ ಡಿಟೈಲ್ಸ್
ಪ್ರೀತಿಸಿ ಕುಟುಂಬದ ಒಪ್ಪಿಗೆ ಪಡೆದು 2 ವರ್ಷದ ಹಿಂದೆ ಚರಣ್ ಜೊತೆ ಮೇಘಾ ವಿವಾಹವಾಗಿದ್ದರು. ಗಂಡನೊಂದಿಗೆ ಮನಸ್ತಾಪ ಹಿನ್ನೆಲೆ ಮೇಘಾ ತಾಯಿ ಜೊತೆಗಿದ್ದರು. ಬಟ್ಟೆ ತೊಳೆಯಲು ತೆರಳಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಚರಣ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.












