ಮೂಡಿಗೆರೆ: ಮುಂದುವರೆದ ವರುಣನ ಅಬ್ಬರ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕೊಟ್ಟಿಗೆಹಾರದಿಂದ ಬಣಕಲ್ ಹೋಗುವ ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ನದಿಯ ಕಿರು ಕಾಲುವೆಗೆ ನೇರವಾಗಿ ಬಿದ್ದಿದೆ. ಕಾರು ಮಂಗಳೂರು ಕಡೆಯಿಂದ ಮೂಡಿಗೆರೆ ಕಡೆಗೆ ಸಾಗುತ್ತಿದ್ದಾಗ ಮಳೆಗೆ ತಿರುವು ಕಾಣದೇ ಹಳ್ಳಕ್ಕೆ ಬಿದ್ದಿದೆ.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 6000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಈ ಹೆದ್ದಾರಿಯಲ್ಲಿ ನೀರು ನಿಲ್ಲುವುದರಿಂದ ಈವರೆಗೆ ಸುಮಾರು ಮೂರು ನಾಲ್ಕು ವಾಹನಗಳು ಅಪಘಾತಕ್ಕೀಡಾಗಿವೆ. ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಣಕಲ್ ಸಮೀಪ ಹೆದ್ದಾರಿ ಸಮತಟ್ಟು ಇಲ್ಲದೇ ಇರುವುದರಿಂದ ನೀರು ನಿಂತು ಇಂತಹ ಘಟನೆ ಸಂಭವಿಸುತ್ತಿದೆ.


ಇದನ್ನೂ ಓದಿ: ಪಿಯುಸಿ-ಐಟಿಐ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಸಿಂಪಲ್ ಆಗಿ ಅರ್ಜಿ ಸಲ್ಲಿಸಿ


ನದಿ ದಡದಲ್ಲಿ ನೀರು ಕಡಿಮೆ ಇದ್ದ ಪರಿಣಾಮ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಮೂಲದ ಕಾರು ಎಂದು ತಿಳಿದು ಬಂದಿದೆ. (ವರದಿ- ತನು ಕೊಟ್ಟಿಗೆಹಾರ)


ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!


ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳಿಗೆ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿ ಎಲ್ಲೆಡೆ ಮಳೆ ಆಗುತ್ತಿದ್ದು, ಇಂದು ಜಿಲ್ಲೆಯ ಕೆಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೆ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಹೀಗಾಗಿ ವಾಹನ ಸವಾರರ ಹಿತದೃಷ್ಟಿಯಿಂದ ಆಗುಂಬೆ ಘಾಟಿ ಸಂಚಾರ ನಿಷೇಧಿಸಲಾಗಿದೆ.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್;ಈ ರೀತಿ ಅರ್ಜಿ ಸಲ್ಲಿಸಿ


ಹೌದು, ಆಗುಂಬೆ ಘಾಟಿಯಲ್ಲಿ ಹೆಚ್ಚಿನ ಮಳೆ ಆಗುತ್ತಿದ್ದು, ತಿರುವುಗಳಲ್ಲಿ ಭೂಕುಸಿತ ಉಂಟಾಗಿದೆ. ಹೀಗಾಗಿ ಅಪಘಾತಗಳನ್ನು ತಪ್ಪಿಸಲು ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ನಿನ್ನೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಧಿಸೂಚನೆ ಹೊರಡಿಸಿದ್ದು, ದಿನಾಂಕ 27-06-2024- 15-09-2024 ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.


ಇದನ್ನೂ ಓದಿ: ಆಧಾರ್ ಕೌಶಲ್ಯದಿಂದ ಇಂತಹ ವಿದ್ಯಾರ್ಥಿಗಳಿಗೆ 10,000 ದಿಂದ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಪರ್ಯಾಯ ಮಾರ್ಗ:
ಇನ್ನು ಬದಲಿ ಮಾರ್ಗವಾಗಿ ತೀರ್ಥಹಳ್ಳಿ, ಮಾಸ್ತಿಕಟ್ಟೆ, ಸಿದ್ದಾಪುರ, ಕುಂದಾಪುರ, ಉಡುಪಿ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ತಿಳಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.