ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು ಗುಡ್ಡ ಕುಸಿತ, ವಾಹನ ಅಪಘಾತದಂತಹ ಪ್ರಕರಣಗಳು ಸಂಭವಿಸುತ್ತಿವೆ.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ

ಇಂದು ಮೂಡಿಗೆರೆ ತಾಲ್ಲೂಕಿನ ಬಿದ್ರಹಳ್ಳಿ ಸಮೀಪ ಎರ್ಟಿಗ ವಾಹನವೊಂದು ಪಲ್ಟಿಯಾದ ಘಟನೆ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ನೀರು ನಿಂತ ಕಾರಣದಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನವು ಪಲ್ಟಿ ಹೊಡೆದಿದೆ.
ಇದನ್ನೂ ಓದಿ: SSLC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಕೊಡಗಿನ ಸೋಮವಾರಪೇಟೆಯಿಂದ ಕಳಸಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

ಕಡೂರು: ಸರ್ಕಾರಿ ಕಚೇರಿ ಸೇರಿದಂತೆ ವಿವಿಧೆಡೆ ಪ್ರಿಂಟರ್ ಕಳವು: ಆರೋಪಿ ಬಂಧನ
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ಮೆಸ್ಕಾಂ ಕಚೇರಿಯಲ್ಲಿ 3 ಪ್ರಿಂಟರ್ ಕಳವು ಮಾಡಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ವಿವಿಧೆಡೆ ಕಳವು ಮಾಡಿದ್ದ ಪ್ರಿಂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ತುಮಕೂರು, ಹಾಸನ, ಮಂಡ್ಯ ಸೇರಿದಂತೆ ಚಿಕ್ಕಮಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿರುವ ಸರ್ಕಾರಿ ಕಚೇರಿ, ಮೆಸ್ಕಾಂ ಮತ್ತು ಬೆಸ್ಕಾಂ ಕಛೇರಿ, ನ್ಯಾಯಾಲಯ ಮತ್ತು ಕಾಲೇಜುಗಳಿಂದ ಪ್ರಿಂಟರ್ ಗಳನ್ನು ಕಳವು ಮಾಡಿದ್ದು, ಸುಮಾರು 6.22 ಲಕ್ಷ ಬೆಲೆಯ 79 ಪ್ರಿಂಟರ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ತಂಡದಲ್ಲಿ ಸಿಪಿಐ ಕಡೂರು ದುರುಗಪ್ಪ ಕೆ, ಪಿ.ಎಸ್.ಐ ನವೀನ್ ಎನ್. ಪಿ ಮತ್ತು ಪವನ್ ಕುಮಾರ್ ಸಿ . ಸಿ, ಸಿಬ್ಬಂದಿಗಳಾದ ಮಂಜುನಾಥಸ್ವಾಮಿ, ಕುಚೇಲ, ಸ್ವಾಮಿ, ದೇವರಾಜ್, ಬೀರೇಶ, ಮಧು, ಹರೀಶ, ಮಹಮ್ಮದ್ ರಿಯಾಜ್, ಈಶ್ವರಪ್ಪ, ಕಿಶೋರ್, ರವಿ ಕುಮಾರ್, ಧನಪಾಲನನಾಯ್ಕ ಮತ್ತು ಜಯಮ್ಮ ಇದ್ದರು.












