ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗವಾಗಿ ಚಲಿಸಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.

ಮೂಡಿಗೆರೆ ಕೊಟ್ಟೆಗೆಹಾರ ಮಧ್ಯೆ ಬಿದರಹಳ್ಳಿ ಗ್ರಾಮದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಮಂಗಳೂರು-ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿತ್ರದರ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯಲ್ಲಿ ಇರುವ ಬಿದರಹಳ್ಳಿಯ ಹನೀಫ್ ಎಂಬುವವರ ಮನೆಗೆ ಡಿಕ್ಕಿ ಹೊಡೆದಿದೆ. ಸೋಮವಾರ ರಾತ್ರಿ ಸುಮಾರು 1-30ರ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಚಾಲಕನು ನಿದ್ರೆಯ ಮಂಪರಿನಿಂದ ಈ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ಇನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೋವಾ ಹೈಬ್ರೀಡ್ ಕಾರಿನಲ್ಲಿ ಚಿತ್ರದುರ್ಗ ಮೂಲದ ಕುಟುಂಬದವರು ಧರ್ಮಸ್ಥಳದ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. (ವರದಿ- ತನು ಕೊಟ್ಟಿಗೆಹಾರ)

ಮೂಡಿಗೆರೆ: ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ : 7 ಮಂದಿ ಬಂಧನ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಕೋಗಿಲೆ ಗ್ರಾಮದ ಸಮೀಪವಿರುವ ಪ್ಲಾಂಟೇಶನ್ ಬಳಿ ನಡೆದಿದೆ.
ಇದನ್ನೂ ಓದಿ; SSLC ಪಾಸ್ ಆದವರಿಗೆ ಗುಡ್ ನ್ಯೂಸ್; SSC GD ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
ಖಚಿತ ಮಾಹಿತಿಯೊಂದಿಗೆ ಬಾನುವಾರ ಬಣಕಲ್ ಸಬ್ ಇನ್ಸ್ಪೆಕ್ಟರ್ ರೇಣುಕಾ ಸಾರಥ್ಯದಲ್ಲಿ ಪೊಲೀಸರ ತಂಡದೊಂದಿಗೆ ಇಸ್ಪೀಟ್ ಆಟ ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ್ದು, ಹಣದೊಂದಿಗೆ ಒಟ್ಟು 7 ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಜಗದೀಶ್, ಕಿರಣ್, ಮೆಹಬೂಬ್, ಮಾಲತೇಶ್, ಅಶೋಕ್, ಸಚ್ಚಿನ್, ದಿಲೀಪ್ ಇದ್ದರು.












