ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸಮೀಪದ ಕುಂಡ್ರ ಎಂಬಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಸಂಬಂಧ ಮೂಡಿಗೆರೆ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐವರನ್ನು ಬಂಧಿಸಲಾಗಿತ್ತು. ಈ ಪ್ರಕಣರದಲ್ಲಿ ಪ್ರಮುಖ ಆರೋಪಿ ಎನ್ನಲಾಗಿದ್ದ ಸುರೇಶ್ ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ. ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆ; sslc, puc ಪಾಸ್ ಆದವರಿಗೆ ಆಯೋಜನೆ; 15 ರಿಂದ 30 ಸಾವಿರ ಸಂಬಳ

ಮಂಗಳವಾರ ಸುರೇಶ್ ಮೂಡಿಗೆರೆ ನ್ಯಾಯಾಲಯಕ್ಕೆ ಶರಣಾಗಲು ಬರುತ್ತಾನೆ ಎಂಬ ಖಚಿತ ಮಾಹಿತಿ ಮೇರೆಗೆ ಮೂಡಿಗೆರೆ ನ್ಯಾಯಾಲಯದ ಸಮೀಪ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಹರೆ ಹಾಕಿದ್ದರು. ಸುಮಾರು 5 ಗಂಟೆಯ ಸಮಯದಲ್ಲಿ ಸುರೇಶ್ ನನ್ನು ನ್ಯಾಯಾಲಯದ ಸಮೀಪ ವಶಕ್ಕೆ ಪಡೆದು ನ್ಯಾಯಾಧೀಶರ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹುಲಿ ಹತ್ಯೆ ಕುರಿತು ವಿಡಿಯೋ ರೆಕಾರ್ಡ್:
ಈ ಪ್ರಕರಣದ ಆರೋಪಿಯೊಬ್ಬ ಹುಲಿ ಹತ್ಯೆಯ ಬಗ್ಗೆ ಎಳೆ ಎಳೆಯಾಗಿ ಮಾತನಾಡಿರುವ ವಿಡಿಯೋ ಒಂದು ರೆಕಾರ್ಡ್ ಆಗಿದ್ದು, ಅದರಲ್ಲಿ ಕುಂಡ್ರ ಸುರೇಶ್ ನೇ ಹುಲಿಯನ್ನು ಬಂದೂಕಿನಿಂದ ಹೊಡೆದಿದ್ದಾನೆ ಎಂದು ಹೇಳಿದ್ದಾನೆ ಎನ್ನಲಾಗಿದೆ. ಅಲ್ಲದೇ ಪ್ರಕರಣದ ಒಂದನೇ ಆರೋಪಿಯೆಂದು ಬಂಧಿತರಾಗಿರುವ ಸತೀಶ್ ಅವರ ಬೈಕಿಗೆ ಹುಲಿ ಅಂಗಾಂಗಗಳನ್ನು ಇಟ್ಟು ಅವರನ್ನು ಪ್ರಕರಣದಲ್ಲಿ ಸಿಲುಕಿಸಿರುವ ಬಗ್ಗೆಯೂ ಆತ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ: ಮೇ 1 ರಿಂದ ದೇಶಾದ್ಯಂತ ಹೊಸ ರೂಲ್ಸ್ ಜಾರಿ!; ಈ ಎಲ್ಲಾ ನಿಯಮಗಳಲ್ಲಿ ಬದಲಾವಣೆ; ಇಲ್ಲಿದೆ ನೋಡಿ ಡಿಟೈಲ್ಸ್
ಈ ಪ್ರಕರಣದ ಕುರಿತು ಅರಣ್ಯ ಇಲಾಖೆ ಗಂಭೀರವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ತರೀಕೆರೆ: ಬಟ್ಟೆ ತೊಳೆಯಲು ಹೋಗಿದ್ದ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪ್ರೀತಿಸಿ ವಿವಾಹವಾಗಿ ದೂರವಾಗಿದ್ದ ಪತ್ನಿಯನ್ನು ಪತಿಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ. ಕರಕುಚ್ಚಿ ಗ್ರಾಮದ ಮೇಘಾ(20) ಮೃತ ಪತ್ನಿ, ಚರಣ್ ಹತ್ಯೆಗೈದ ಪತಿ.
ಇದನ್ನೂ ಓದಿ: ಮೇ 1 ರಿಂದ ದೇಶಾದ್ಯಂತ ಹೊಸ ರೂಲ್ಸ್ ಜಾರಿ!; ಈ ಎಲ್ಲಾ ನಿಯಮಗಳಲ್ಲಿ ಬದಲಾವಣೆ; ಇಲ್ಲಿದೆ ನೋಡಿ ಡಿಟೈಲ್ಸ್
ಪ್ರೀತಿಸಿ ಕುಟುಂಬದ ಒಪ್ಪಿಗೆ ಪಡೆದು 2 ವರ್ಷದ ಹಿಂದೆ ಚರಣ್ ಜೊತೆ ಮೇಘಾ ವಿವಾಹವಾಗಿದ್ದರು. ಗಂಡನೊಂದಿಗೆ ಮನಸ್ತಾಪ ಹಿನ್ನೆಲೆ ಮೇಘಾ ತಾಯಿ ಜೊತೆಗಿದ್ದರು. ಬಟ್ಟೆ ತೊಳೆಯಲು ತೆರಳಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಚರಣ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.












