ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ 1000 ಅಡಿ ಪ್ರಪಾತಕ್ಕೆ ಟಿಪ್ಪರ್ ಲಾರಿ ಉರುಳಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ವ್ಯೂ ಪಾಯಿಂಟ್ ಬಳಿ ಶುಕ್ರವಾರ ಮಧ್ಯರಾತ್ರಿ ನಡೆದಿದೆ.

ಇದನ್ನೂ ಓದಿ; ಯುವಜನತೆಗೆ ಗುಡ್ ನ್ಯೂಸ್; ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ

ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್ ಲಾರಿ, ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ಛಿದ್ರ ಛಿದ್ರವಾಗಿದೆ. ಚಾಲಕನಿಗೆ ಸೊಂಟಕ್ಕೆ ಪೆಟ್ಟಾದ ಕಾರಣ ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
ಸ್ಥಳಕ್ಕೆ ಪೊಲೀಸ್ ಅಭಿಷೇಕ್, ಅರಣ್ಯ ಇಲಾಖೆ ಬೀಟ್ ಫಾರೆಸ್ಟ್ ಅಭಿಜಿತ್, ಸಮಾಜ ಸೇವಕ ಆರಿಫ್ ಹಾಗೂ ಕುಂಜಿಮೊಣು ಕಾರ್ಯಚರಣೆಯಲ್ಲಿ ಇದ್ದರು. (ವರದಿ- ತನು ಕೊಟ್ಟಿಗೆಹಾರ)

ಚಿಕ್ಕಮಗಳೂರು: ಕ್ರಿಕೆಟ್ ಆಡಲು ಬಂದಿದ್ದ ಪಶುವೈದ್ಯ ಸಾವು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕ್ರಿಕೆಟ್ ಆಡಲು ಬಂದಿದ್ದ ಪಶುವೈದ್ಯ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸೋಮವಾರ ಪೇಟೆ ಪಶುವೈದ್ಯರಾಗಿದ್ದ ಶಿವಪ್ಪ ಬಾದಾಮಿ ಹೃದಯಾಘಾತದಿಂದ ಮೃತಪಟ್ಟ ವೈದ್ಯ.
ವಿಭಾಗ ಮಟ್ಟದ ಕ್ರಿಕೆಟ್ ಕ್ರೀಡಾಕೂಟಕ್ಕೆ ಆಗಮಿಸಿದ್ದ ಪಶುವೈದ್ಯ ಕ್ರಿಕೆಟ್ ಆಡಿ ಫೋಟೋ ಸೆಷೆನ್ ನಲ್ಲಿ ಪಾಲ್ಗೊಂಡು ನಂತರ ಕ್ರಿಕೆಟ್ ನೋಡುತ್ತಿದ್ದಂತೆ ಕುಳಿತಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಇತರೆ ವೈದ್ಯರು ಚಿಕಿತ್ಸೆಗೆ ಮುಂದಾದರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ.
ಶಿವಪ್ಪ ಬಾದಾಮಿ ಅಕಾಲಿಕ ಮರಣಕ್ಕೆ ಪಶುವೈದ್ಯ ಲೋಕದ ಕಂಬನಿ ಮಿಡಿದಿದ್ದು, ಕ್ರೀಡಾಕೂಟವನ್ನು ಸ್ಥಗಿತಗೊಳಿಸಲಾಯಿತು. ಶಿವಪ್ಪ ಬಾದಾಮಿಯವರ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.












