ಮೂಡಿಗೆರೆ/ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟಿಯಲ್ಲಿ ಸಂಜೆಯೊಂದು ಲಾರಿ ಪಲ್ಟಿಯಾಗಿತ್ತು, ಈಗ ಮತ್ತೋಂದು ಲಾರಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ರಸ್ತೆಯ ಮಧ್ಯೆ ನಡೆದಿದೆ.

ಚಾರ್ಮಾಡಿ ಘಾಟಿಯಲ್ಲಿ ಸಂಜೆ ಖಾಲಿ ಸಿಲಿಂಡರ್ ರವಾನಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಒಂದು ಪಲ್ಟಿಯಾಗಿತ್ತು, ಈಗ ಅದೇ ಘಾಟಿನಲ್ಲಿ ಮರದ ಒಟ್ಟು ತುಂಬಿಕೊಂಡು ಹೊರಟ ಲಾರಿ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ
ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಲಾರಿ ಪಲ್ಟಿಯಾದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಸುಮಾರು 10 ಕಿ.ಮೀ.ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಜಾಮ್ ಹೆಚ್ಚಾಗಿದ್ದರಿಂದ ಪೊಲೀಸರು ವಾಹನಗಳ ನಿಯಂತ್ರಣಕ್ಕಾಗಿ ಕೊಟ್ಟಿಗೆಹಾರದಲ್ಲಿ ರಸ್ತೆ ಬಂದ್ ಮಾಡಿ, ರಸ್ತೆಗೆ ಅಡ್ಡವಾಗಿ ಬ್ಯಾರಿಕೇಡ್ ಹಾಕಿ ರಸ್ತೆಯನ್ನೇ ಬಂದ್ ಮಾಡಿದ್ದರು.ಈ ಘಟನೆಗೆ ಸಂಭಂದಿಸಿದಂತೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













