ಮೂಡಿಗೆರೆ: ಚಾರ್ಮಾಡಿ ಘಾಟ್ ನ ಸಮೀಪ ಎರಡು ಕಾಡಾನೆಗಳು ಪ್ರತ್ಯಕ್ಷ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟ್ ನ ಮಲಯ ಮಾರುತ ಸಮೀಪ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದೆ.

 

ಇದನ್ನೂ ಓದಿ; ಗೃಹಲಕ್ಷ್ಮೀ ಹಣ ಬಂದಿಲ್ವಾ?; ಈ ದಾಖಲೆಗಳನ್ನು ಇವರಿಗೆ ತಲುಪಿಸಿ; ಇನ್ನು ಕೆಲವೇ ದಿನಗಳು ಮಾತ್ರ ಬಾಕಿ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್ ನ ಮಲಯ ಮಾರುತ ಸಮೀಪವಿರುವ ಗುಡ್ಡದಲ್ಲಿ ಎರಡು ಕಾಡಾನೆಗಳು ಕಂಡುಬಂದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಗಸ್ತು ಅಧಿಕಾರಿ ಪರಮೇಶ್, ಸಹಾಯಕ ಸಿಬ್ಬಂದಿ ದಿನೇಶ್, ಸುಂದರಬೈಲ್ ತೋಟದ ರೈಟ್ರು ವಿಜೇಂದ್ರ ಸೇರಿ ಪಟಾಕಿಗಳನ್ನು ಹೊಡೆದು ಓಡಿಸಲು ಹರಸಹಾಸ ಪಟ್ಟುರು. ಇದೀಗ ಬಾಳೂರಿನ ಒಂಬತ್ತನೇ ಗುಡ್ಡ ಹಾಗೂ ಸುಂದರ ಬೈಲ್ ನಲ್ಲಿ ಕಾಡಾನೆಗಳು ಬೀಡುಬಿಟ್ಟಿವೆ ಎನ್ನಲಾಗಿದೆ.

ಇದನ್ನೂ ಓದಿ; ರಾಜೌರಿಯಲ್ಲಿ ಗುಂಡಿನ ಕಾಳಗ; ಕನ್ನಡಿಗ ಯೋಧ ಕ್ಯಾಪ್ಟನ್ ಪ್ರಾಂಜಲ್ ಹುತಾತ್ಮ

ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವವರೇ ಎಚ್ಚರ:
ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ವೇಳೆ ಸಂಚಾರ ಮಾಡುವವರು ಅತ್ಯಂತ ಎಚ್ಚರವಾಗಿರಬೇಕು. ಘಾಟಿಯ ಎರಡೂ ಬದಿಯಲ್ಲೂ ಸಾವಿರಾರು ಅಡಿ ಪ್ರಪಾತವಿದ್ದು, ಕಾಡಾನೆ ರಸ್ತೆಗೆ ಬಂದರೆ ವಾಹನವನ್ನು ವಾಪಸ್ ತೆಗೆಯೋದು ಕಷ್ಟಸಾಧ್ಯ. ಆದರಿಂದ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಮಾಡುವವರು ಅತ್ಯಂತ ಎಚ್ಚರವಾಗಿರಬೇಕು. (ವರದಿ-ತನು ಕೊಟ್ಟಿಗೆಹಾರ)

 

ಬೆನ್ನು ಹುರಿ ಮುರಿದು ಹಾಸಿಗೆ ಹಿಡಿದ ವಿದ್ಯಾರ್ಥಿನಿ | ಬಾಲಕಿಯ ಚಿಕಿತ್ಸೆಗೆ ನೆರವು ಕೋರಿದ ಪೋಷಕರು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಹಾರ್ಗೋಡು ಗ್ರಾಮದ 5ನೇ ತರಗತಿ ಬಾಲಕಿ ನಿಶಿತಾ ಆಟವಾಡುವಾಗ ಬಿದ್ದು ಬೆನ್ನ ಹುರಿ (ಸ್ಪೈನಲ್ ಕಾರ್ಡ್) ಮುರಿದು ಹಾಸಿಗೆ ಹಿಡಿದಿರುವ ಕರಣಾಜನಕ ಘಟನೆ ನಡೆದಿದೆ.

 

ಬಾನಳ್ಳಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ನಿಶಿತಾ ಪ್ರತಿಭಾವಂತೆಯಾಗಿದ್ದು, ಶಾಲೆಯಲ್ಲಿ ಓದುವುದರಲ್ಲೂ ಮುಂದಿದ್ದಳು. ಅರಳು ಹುರಿದಂತೆ ಮಾತನಾಡುವ ಬಾಲಕಿಗೆ ಶಾಲೆಯ ಒಂದು ದಿನದ ರಜೆ ತನ್ನ ಜೀವನವನ್ನೇ ಕೊರಗಿಸುವಂತೆ ಮಾಡಿದೆ.

ಮನೆಯ ಪಕ್ಕದ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ತಲೆಕೆಳಗಾಗಿ ಬಿದ್ದು ತನ್ನ ದೇಹದ ಕೈಕಾಲಿನ ಸ್ವಾಧೀನ ಕಳೆದುಕೊಂಡಿದ್ದಾಳೆ. ಬಾಲಕಿ ಹಾರ್ ಗೋಡಿನ ಕೆ.ಆರ್. ಶ್ರೀಧರ್ ಹಾಗೂ ಗೀತಾ ದಂಪತಿಯ ಪುತ್ರಿಯಾಗಿದ್ದು ಇವರು ಕೂಲಿ ಕಾರ್ಮಿಕರಾಗಿದ್ದು, ದಿನದ ಒಪ್ಪತ್ತಿಗೂ ಕೂಲಿ ಕೆಲಸವನ್ನೇ ಅವಲಂಬಿಸಿದ್ದಾರೆ.

ಮಗಳ ಅನಾರೋಗ್ಯದಿಂದ ಕಂಗೆಟ್ಟು ಹೋಗಿದ್ದು, ಬಾಲಕಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಅಲ್ಲಿ ವೈದ್ಯರು ಪರೀಕ್ಷೆ ನಡೆಸಿ ಶೇ ನೂರರಷ್ಟು ಭರವಸೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ, ಔಷಧಿಗೆ ಶೇ 50 ರಷ್ಟು ಸ್ಪಂಧಿಸಿರುವ ಬಾಲಕಿ ಈಗ ಒಂದು ಕೈ ಹಾಗೂ ಕಾಲುಗಳಿಗೆ ಸ್ಪರ್ಷ ಬಂದಿದೆ.

ಬಣಕಲ್ ನ ಶ್ರೀ ಕೃಷ್ಣ ಕ್ಲಿನಿಕ್ ವೈದ್ಯರು ಅವಳಿಗೆ ಪಿಸಿಯೋತೆರಫಿ ನೀಡುತ್ತಿದ್ದಾರೆ. ಬಾಲಕಿಯು ಗುಣವಾಗುತ್ತೇನೆಂಬ ಆತ್ಮವಿಶ್ವಾಸದಿಂದ ಮುಂದಿನ ಕನಸು ಕಾಣುತ್ತಿದ್ದಾಳೆ. ನಿಲ್ಲಲು ಆಗದ ಕೈಯನ್ನು ಎತ್ತಲು ಆಗದ ಸ್ಥಿತಿಯಿಂದ ಇರುವ ಬಾಲಕಿ ನಿಶಿತಾಗೆ ಪೋಷಕರು ಚಿಕಿತ್ಸೆಗೆ ನೆರವು ಕೋರಿ ಪತ್ರಿಕೆಯೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಮಗುವಿನ ಚಿಕಿತ್ಸೆಗೆ ಸುಮಾರು 5 ಲಕ್ಷ ಖರ್ಚಿದ್ದು, ಸಹೃದಯಿಗಳಲ್ಲಿ ನೆರವಿನ ಹಸ್ತ ಚಾಚಿದ್ದಾರೆ. ಹೆಚ್ಚಿನ ಮಾಹಿತಿಗೆ ಪೋಷಕರ ದೂರವಾಣಿ ಸಂಖ್ಯೆ 9980430710 ಕರೆ ಮಾಡಬಹುದು. ಅಥವಾ

ದಾನಿಗಳು ಖಾತೆ ಸಂಖ್ಯೆ 0692500136635601
IFSC CODE: KARB0000069 ಅವರ ಖಾತೆಗೆ ಹಣ ಹಾಕಬಹುದು ಅಥವಾ ಪೋನ್ ಪೇ ಮಾಡುವ ಮೂಲಕ ನೆರವು ನೀಡಬಹುದು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.