
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ತಂದೆ ಬೈದರು ಎಂಬ ಕ್ಷುಲ್ಲಕ ಕಾರಣಕ್ಕೆ ಯುವತಿಯೋರ್ವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸೌಜನ್ಯ ಪೂಜಾರಿ (22) ನೇಣಿಗೆ ಶರಣಾದ ಯುವತಿ.
ಸೌಜನ್ಯ ಅವರ ತಂದೆ ಶನಿವಾರ ಬೆಳಗ್ಗೆ ತರಕಾರಿ ತಂದು ಮಗಳು ಸೌಜನ್ಯ ಅವರಿಗೆ ಸಾಂಬಾರು ಮಾಡುವಂತೆ ತಿಳಿಸಿ ಹೊರ ಹೋಗಿದ್ದರು. ಮಧ್ಯಾಹ್ನ 2 ಗಂಟೆಗೆ ಮನೆಗೆ ವಾಪಾಸ್ ಬಂದ ವೇಳೆ ಮಗಳು ಸಾಂಬಾರ್ ಮಾಡಿಲ್ಲವೆಂಬ ಕಾರಣಕ್ಕೆ ಬೈದು ಪಕ್ಕದ ಮನೆಯಿಂದ ಸಾಂಬಾರ್ ತರಲು ತೆರಳಿದ್ದಾರೆ. ಈ ಸಮಯದಲ್ಲಿ ಸೌಜನ್ಯ ಮನೆ ಬಾಗಿಲು ಹಾಕಿಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














