ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮೂಡಿಗೆರೆಯ ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಇದನ್ನೂ ಓದಿ: ಆಸ್ತಿ ಮಾಲೀಕರ ಗಮನಕ್ಕೆ; ಇ-ಖಾತಾ ಪಡೆಯುವುದು ಇನ್ನಷ್ಟು ಸುಲಭ; ಇಲ್ಲಿದೆ ನೋಡಿ ಸುಲಭ ಹಂತ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಭಾನುವಾರ ತಡರಾತ್ರಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಇದನ್ನೂ ಓದಿ: ಇನ್ಮುಂದೆ ಇಂತಹವರಿಗೆ ಸಿಗಲ್ಲ ರೇಷನ್!, ಯಾಕೆ ಗೊತ್ತಾ?; ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ
ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ ಕಾರು ಹಾಗೂ ಕೊಟ್ಟಿಗೆಹಾರ ಕಡೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದ್ದು ಕಾರಿನಲ್ಲಿ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಹಂಪೆಯ ವೇದಮ್ಮ(55) ಜ್ಞಾನಮ್ಮ(70), ಮಂಜುಳಾ(50) ಮತ್ತು ರೇಣುಕಾ(26) ಗಂಭೀರವಾಗಿ ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಕ್ಕಳಿಗೆ ಯಾವುದೇ ರೀತಿಯ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಕೇಂದ್ರ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಭರ್ಜರಿ ಅನುದಾನ; ಕೃಷಿ ಕ್ಷೇತ್ರದಲ್ಲಿ ಸಬ್ಸಿಡಿ ಸೇರಿದಂತೆ ಸಾಲದ ಮಿತಿ ಹೆಚ್ಚಳ!












