ಮೂಡಿಗೆರೆ: ವಾಕ್ ಮುಗಿಸಿ ರಸ್ತೆ ದಾಟುವಾಗ ಸ್ಕೂಟಿ ಡಿಕ್ಕಿ | ಗಂಭೀರ ಗಾಯ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ)  ವಾಕ್ ಮುಗಿಸಿ ರಸ್ತೆ ದಾಟುವಾಗ ಸ್ಕೂಟಿ ಡಿಕ್ಕಿಯಾಗಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಕಾಫಿ ಕ್ಯೂರಿಂಗ್ ಬಳಿ ನಡೆದಿದೆ. ಸಮೀರ್ ಅಪಘಾತಕ್ಕೊಳಗಾದ ವ್ಯಕ್ತಿ.

 

ಇದನ್ನೂ ಓದಿ; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಯಾವ ಜಿಲ್ಲಾ ನ್ಯಾಯಾಲಯ, ಅರ್ಹತೆ ಏನು, ಅರ್ಜಿ ಸಲ್ಲಿಕೆ ಹೇಗೆ?

ಬೆಳಗಿನ ಜಾವ ವಾಕ್ ಮುಗಿಸಿ ರಸ್ತೆ ದಾಟುವಾಗ ಸ್ಕೂಟಿ ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರ ಜೊತೆಗೆ ದಾರಿ ಹೊಕ್ಕ ಹಾರಿ ಬಿದ್ದಿದ್ದಾರೆ. ಅಪಘಾತದ ತೀವ್ರತೆಗೆ ಸಮೀರ್ ಕಾಲು ಮುರಿದಿದ್ದು, ಮುಖ-ಕೈ- ಕಾಲಿಗೆ ತೀವ್ರ ಪೆಟ್ಟಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಕೂಟಿ ಚಾಲಕನಿಗೂ ಗಂಭೀರ ಗಾಯವಾಗಿದ್ದು, ಮೂಡಿಗೆರೆ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ; ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ;  LPG ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)

 

ಶೃಂಗೇರಿ: ಬಸ್ ನಿಲ್ದಾಣದಲ್ಲಿ ಕಳ್ಳರ ಕೈಚಳಕ | ಟ್ರೇ ಬಾಕ್ಸ್ ಸಮೇತ ಹಣ ಎಗರಿಸಿದ ಕಳ್ಳರು

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ)  KSRTC ಬಸ್ ನೊಳಗೆ ಕಳ್ಳರು ನುಗ್ಗಿ ಟ್ರೇ ಬಾಕ್ಸ್ ಹಾಗೂ ಟಿಕೆಟ್ ಮೆಷಿನ್ ನನ್ನು ಕದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.

 

ಇದನ್ನೂ ಓದಿ; ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 119 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ; 17,000-28,950 ಮಾಸಿಕ ವೇತನ

ಮೈಸೂರಿನಿಂದ ಶೃಂಗೇರಿಗೆ ಬಂದು ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನ ನಿರ್ವಾಹಕ ಮೂರ್ತಿಯವರ ಟಿಕೆಟ್ ಮೆಷಿನ್ ಹಾಗೂ ಟ್ರೇ ಬಾಕ್ಸ್ ಸಮೇತ ಅದರೊಳಗಿದ್ದ 15,000 ಹಣವನ್ನು ಕಳವು ಮಾಡಲಾಗಿದೆ. ಈ ಸಂಬಂಧ ಶೃಂಗೇರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ರಾಷ್ಟ್ರ ಕವಿ ಕುವೆಂಪು ಬಸ್ ನಿಲ್ದಾಣದಲ್ಲಿ ಭದ್ರತೆ ದೃಷ್ಟಿಯಿಂದ ಸರಿಯಾದ ಸಿಸಿಟಿವಿ ವ್ಯವಸ್ಥೆ ಇದ್ದಿದರೆ ಈ ರೀತಿಯ ಘಟನೆ ನಡೆಯುತ್ತಿರಲಿಲ್ಲ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.