ಕಡೂರು: ಕೊಲೆ ಪ್ರಕರಣ, ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಕಳೆದ ಐದು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.


ಇದನ್ನೂ ಓದಿ: 2,000 ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ


22.11.2020 ರಂದು ಸಖರಾಯಪಟ್ಟಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ದೊಡ್ಡಿಹಟ್ಟಿ ಗ್ರಾಮದಲ್ಲಿ ಪ್ರದೀಪ ಎಂಬುವವನನ್ನು ಆತನ ಹೆಂಡತಿ ರಾಗಿಣಿ (33) ಮತ್ತು ಪ್ರದೀಪನೊಂದಿಗೆ ಗಾರೆ ಕೆಲಸ ಮಾಡಿಕೊಂಡಿದ್ದ ಶ್ರೀನಿವಾಸ (33) ಸೇರಿಕೊಂಡು ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ ಹಿನ್ನಲೆಯಲ್ಲಿ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗಳನ್ನು ಬಂಧಿಸಿ ತನಿಖೆಯನ್ನು ಪೂರ್ಣಗೊಳಿಸಿ ಕಡೂರು ವೃತ್ತದ ಅಂದಿನ ಸಿ.ಪಿ.ಐ.ಬಿ. ಎಸ್. ಮಂಜುನಾಥ್ ರವರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.


ಇದನ್ನೂ ಓದಿ: 10th ಪಾಸಾದವರಿಗೆ ಸರ್ಕಾರಿ ಉದ್ಯೋಗ; 21,000 ಸಂಬಳ


ಆರೋಪ ಸಾಭೀತಾದ ಹಿನ್ನಲೆಯಲ್ಲಿ ಘನ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿಕ್ಕಮಗಳೂರು ನಿನ್ನೆ ಇಬ್ಬರೂ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ರೂ. 60,000/- ದಂಡವನ್ನು ವಿಧಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹೆಚ್ ಎಸ್‌ ಲೋಹಿತಾಶ್ವಚಾರ್ ರವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಎ.ಎಸ್.ಐ. ದೇವೇಂದ್ರ ಕುಮಾರ್ ಎಸ್ ಓ ರವರು ನ್ಯಾಯಾಲಯದ ಕರ್ತವ್ಯ, ಪೊಲೀಸ್ ಸಿಬ್ಬಂದಿಗಳಾದ ವಸಂತ್ ಕುಮಾರ್ ಮತ್ತು ನಜೀರ್ ಬಿ ಎ ರವರು ತನಿಖಾ ಸಹಾಯಕರಾಗಿ ಹಾಗೂ ರೇಣುಕರಾಜ್ ರವರು ಪ್ರೋಸೆಸ್ ಕರ್ತವ್ಯ ನಿರ್ವಹಿಸಿದ್ದಾರೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ವಿದ್ಯುತ್ ಸಂಪರ್ಕಗಳಿಗೆ ರಿಯಾಯಿತಿ ಹೆಚ್ಚಳ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.