ಮೂಡಿಗೆರೆ: ಕುಡಿದ ಮತ್ತಿನಲ್ಲಿ ಸಹೋದರನ ಅತ್ತೆಯ ಕೊಲೆ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕುಡಿದು ಗಲಾಟೆ ಮಾಡುತ್ತಿದ್ದವನಿಗೆ ಬುದ್ದಿವಾಗ ಹೇಳಿದ್ದಕ್ಕೆ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದೆ. ಕಣತಿ ಗ್ರಾಮದ ದರಣಪ್ಪ ಪೂಜಾರಿ ಅವರ ಪತ್ನಿ ಯಮುನಾ ಕೊಲೆಯಾದ ದುರ್ದೈವಿ.


ಇದನ್ನೂ ಓದಿ: ಹೊಸ ರೇಷನ್‌ ಕಾರ್ಡ್‌ʼಗೆ ಅರ್ಜಿ ಸಲ್ಲಿಕೆ ಆರಂಭ!; ಈ ದಾಖಲೆ ಕಡ್ಡಾಯ


ಆರು ತಿಂಗಳಿನಿಂದ ಪುತ್ರಿಯ ಮನೆ ಭಾರತಿ ಬೈಲ್ ಗ್ರಾಮಕ್ಕೆ ಬಂದು ನೆಲೆಸಿದ್ದ ಯಮುನಾ ಅವರು ಭಾನುವಾರ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಮಗಳ ಮನೆಗೆ ಬಂದಿದ್ದರು. ಆಗ ಮನೆಯಲ್ಲಿ ಕುಡಿದು ಜಗಳವಾಡುತ್ತಿದ್ದ ಮಗಳ ಗಂಡನ ಅಣ್ಣ ಶಶಿಧರ ಪೂಜಾರಿಗೆ ಯಮುನಾ ಬುದ್ದಿವಾದ ಹೇಳಿದ್ದಾರೆ.

ಇದರಿಂದ ಕೋಪಗೊಂಡ ಶಶಿಧರ ಪೂಜಾರಿ ಸುತ್ತಿಗೆಯಿಂದ ಯಮುನಾ ಅವರ ತಲೆಗೆ ಹೊಡೆದಿದ್ದಾನೆ ಯಮುನಾ ಸ್ಥಳದಲ್ಲಿ ಕುಸಿತು ಬಿದ್ದಿದ್ದಾರೆ. ಕೂಡಲೇ ಅವರನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಷ್ಟೊರೊಳಗೆ ಯಮುನಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಜಾಬ್‌ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಆರೋಪಿ ಶಶಿಧರ ಪೂಜಾರಿ ಪರಾರಿಯಾಗಿದ್ದು, ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ- ತನು ಕೊಟ್ಟಿಗೆಹಾರ)


ಇದನ್ನೂ ಓದಿ: ಒಂದೇ ಚಾರ್ಜ್‌ನಲ್ಲಿ 320 ಕಿ.ಮೀ. ಪ್ರಯಾಣ; ಮತ್ತೊಂದು ಹೊಸ ಸ್ಕೂಟರ್ ಅನಾವರಣ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.