ಎನ್.ಆರ್.ಪುರ: (ನ್ಯೂಸ್ ಮಲ್ನಾಡ್ ವರದಿ) ತಾಲೂಕು ಶಾಮಿಯಾನ, ಡೆಕೋರೇಷನ್ ಧ್ವನಿ ಮತ್ತು ಬೆಳಕು ಮಾಲೀಕರ ಸಂಘ ನರಸಿಂಹರಾಜಪುರ ಇವರ ವತಿಯಿಂದ 68 ನೇ ವರ್ಷದ ಕನ್ನಡ ರಾಜ್ಯೋತ್ಸವನ್ನು 21.11.2023 ಮಂಗಳವಾರ (ಇಂದು) ಗಣಪತಿ ಪೆಂಡಾಲ್ ಪಕ್ಕ, ನರಸಿಂಹರಾಜಪುರದಲ್ಲಿ ಆಯೋಜಿಸಲಾಗಿದೆ.
ಇದನ್ನೂ ಓದಿ; ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ; ಈಗೆಷ್ಟಿದೆ ಗ್ಯಾಸ್ ಬೆಲೆ?

68 ನೇ ವರ್ಷದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹಲವು ಕಾರ್ಯಕ್ರಮವನ್ನು ಆಯೋಜಿಸಿದ್ದು, ಇಂದು ಬೆಳಗ್ಗೆ 10 ಗಂಟೆಯಿಂದ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಉಚಿತ ಕಣ್ಣು ತಪಾಸಣೆ, ರಕ್ತದೊತ್ತಡ ಹಾಗೂ ಮಧುಮೇಹ, ಸಾಂಕ್ರಾಮಿಕ ರೋಗ ತಪಾಸಣೆಯನ್ನು ನಡೆಸಲಾಗುತ್ತಿದೆ.
ಇದನ್ನೂ ಓದಿ; ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
ಮಧ್ಯಾಹ್ನ 2:30 ಕ್ಕೆ ಬಿ.ಹೆಚ್ ಕೈಮರ ದಿಂದ ಟಿ.ಬಿ ಸರ್ಕಲ್ ಮಾರ್ಗವಾಗಿ ಗಣಪತಿ ಪೆಂಡಾಲ್ ವರೆಗೆ ಕನ್ನಡಾಂಬೆಯ ಭಾವಚಿತ್ರದೊಂದಿಗೆ ಬೃಹತ್ ವರ್ಣರಂಜಿತ ಮೆರವಣಿಗೆ ನಡೆಸಲಾಗುತ್ತದೆ ಹಾಗೂ ದೂರದರ್ಶನದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಹಾಗೂ ಮಜಾಭಾರತ ಖ್ಯಾತಿಯ ನವೀನ್ ಡ್ಯಾನ್ಸ್ ಅಕಾಡಮಿ(ರಿ.) ಇವರಿಂದ ನೃತ್ಯ ಕಾರ್ಯಕ್ರಮ ಹಾಗೂ ರಾಗಮಯೂರಿ ಅಕಾಡಮಿ(ರಿ.) ಇವರಿಂದ ಭರತನಾಟ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಚಿಕ್ಕಮಗಳೂರು: ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ. ಸದ್ಯ ಅಸ್ವಸ್ಥರಾದವರು ಕಡೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮರವಂಜಿ ಗ್ರಾಮದಲ್ಲಿ ಭಾನುವಾರ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ತಯಾರಿಸಿದ ಬಿರಿಯಾನಿ ಸೇವಿಸಿದ ಕೆಲವರಲ್ಲಿ ಸೋಮವಾರ ವಾಂತಿ-ಭೇಧಿ ಕಾಣಿಸಿಕೊಂಡು ಅಸ್ವಸ್ಥಗೊಂಡರು. ಕೂಡಲೇ ಗ್ರಾಮಸ್ಥರು ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿದ್ದಾರೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಇನ್ನು ಶಾಸಕ ಕೆ ಎಸ್ ಆನಂದ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.












