ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ನಿವೃತ್ತ ಶಿಕ್ಷಕನನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನಲ್ಲಿ ನಡೆದಿದೆ. ರಾಮಕೃಷ್ಣ ಬಂಧಿತ ನಿವೃತ್ತ ಶಿಕ್ಷಕ.
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 8000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ

ವಸತಿ ಶಾಲೆಯೊಂದರ 8 ನೇ ತರಗತಿ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಎನ್.ಆರ್.ಪುರ ಪೊಲೀಸರು ಬಂಧಿಸಿ ಚಿಕ್ಕಮಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಹಾಜರು ಪಡಿಸಿ, ನ್ಯಾಯಾಧೀಶರು ಜು.18 ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ರಾಮಕೃಷ್ಣ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರಾಗಿದ್ದು ನಿವೃತ್ತಿ ಹೊಂದಿದ್ದರು. ನಂತರ ವಸತಿ ಶಾಲೆಯೊಂದರಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದರು.
ಕೊಟ್ಟಿಗೆಹಾರ: ಕಾಡಾನೆ ದಾಳಿಗೆ ಬೆಳೆ ಹಾನಿ: ಪರಿಹಾರಕ್ಕೆ ಒತ್ತಾಯ
ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಿಚರ್ಡ್ ಲೋಬೋ ಅವರ ತೋಟಕ್ಕೆ ಕಾಡಾನೆ ನುಗ್ಗಿ ಬೆಳೆ ಹಾನಿ ಮಾಡಿದೆ. ಗುರುವಾರ ರಾತ್ರಿ ಅರಣ್ಯ ಪ್ರದೇಶದಿಂದ ಕಾಡಾನೆ ಬಂದಿದ್ದು, ಬಾಳೆ, ಏಲಕ್ಕಿ, ಕಾಫಿ ಹಾಗೂ ಇನ್ನಿತರ ಬೆಳೆಗಳು ಹಾನಿ ಉಂಟು ಮಾಡಿದ್ದು, ಸಾವಿರಾರು ಬೆಲೆಯ ಬೆಳೆಯನ್ನು ನಾಶ ಮಾಡಿದೆ.












