ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಅಡಿಕೆ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನಲ್ಲಿ ನಡೆದಿದೆ. ಕಡೂರು ಮೂಲದ ಮಹಮ್ಮದ್ ಸಾಧಿಕ್ (39) ಹಾಗೂ ಶಿವಮೊಗ್ಗದ ಲಕ್ಕಿನಕೊಪ್ಪ ವಾಸಿ ಸಲ್ಮಾ(39) ಬಂಧಿತ ಆರೋಪಿಗಳು.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ

ಎನ್. ಆರ್. ಪುರ ತಾಲೂಕಿನ ಮುತ್ತಿನಕೊಪ್ಪ ಸಮೀಪ 65 ರಿಂದ 70 ಅಡಿಕೆ ಮರಗಳಲ್ಲಿನ ಕೊನೆಗಳನ್ನು ಉದುರು ಮಾಡಿ ಹಸಿ ಅಡಿಕೆಯನ್ನು ಕಳ್ಳತನ ಮಾಡಿದ್ದು, ಆರೋಪಿಗಳನ್ನು ಬಂಧಿಸಿ ಸುಮಾರು 202.87 ಕೆ.ಜಿ ಒಣ ಅಡಿಕೆ ಹಾಗೂ ಒಂದು ಕಾರು ವಶಪಡಿಸಿಕೊಂಡಿದ್ದಾರೆ. ಎನ್. ಆರ್. ಪುರ ಅಲ್ಲದೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅಡಿಕೆ ಕಳ್ಳತನ ಮಾಡಿರುವುದು ಪತ್ತೆಯಾಗಿದೆ.

ಇದನ್ನೂ ಓದಿ; ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
ಈ ಕಾರ್ಯಾಚಾರಣೆಯಲ್ಲಿ ಕೊಪ್ಪ ಉಪವಿಭಾಗದ ಡಿ.ಎಸ್.ಪಿ ಬಾಲಾಜಿ ಸಿಂಗ್ ಮತ್ತು ನ,ರಾ ಪುರ ವೃತ್ತ ಸಿಪಿಐ ಗುರುದತ್ ಕಾಮತ್ ರವರ ಮಾರ್ಗದರ್ಶನದಲ್ಲಿ ನ.ರಾ ಪುರ ಪೊಲೀಸ್ ಠಾಣಾ ಪಿಎಸ್ ಐ ನಿರಂಜನ್ ಗೌಡ ಬಿ.ಎಸ್ ಮತ್ತು ಜ್ಯೋತಿ, ಸಿಬ್ಬಂದಿಗಳಾದ ಪರಮೇಶ್, ಬಿನು ಪಿ.ಎ, ಮಧು, ಅಮಿತ್ ಚೌಗಲೆ, ದೇವರಾಜ್, ಕೌಶಿಕ್, ನವೀನ್ ಕುಮಾರ್ ಇದ್ದರು.

ಇದನ್ನೂ ಓದಿ; ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ















