ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಅಳೇಹಳ್ಳಿ ಗ್ರಾಮದ 6 ವರ್ಷದ ಬಾಲಕಿ ಆಪ್ತ ಪಿ.ಗೌಡ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಸಹಾಯ ಮಾಡುವಂತೆ ಪಾಲಕರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: 700 ರೂಪಾಯಿ ತಲುಪಿದ ಕಾಳುಮೆಣಸಿನ ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ರೇಟ್ ಹೇಗಿದೆ?

ಕಳೆದ ಆರು ವರ್ಷಗಳಿಂದ THALASSEMIA MAJOR (ಬೋನ್ ಮ್ಯಾರೋ) ಎಂಬ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ರಾಜ್ಯದ ಹೆಸರಾಂತ ವೈದ್ಯರುಗಳನ್ನು ಸಂಪರ್ಕಿಸಿ ಔಷದೋಪಚಾರ ಮಾಡಲಾಗಿದೆ. ಈವರೆಗೆ ವಿವಿಧ ತಪಾಸಣೆಗಾಗಿ 30 ಲಕ್ಷ ರೂ. ವೆಚ್ಚ ಮಾಡಿದ್ದು, ಮುಂದಿನ ಚಿಕಿತ್ಸೆಗಾಗಿ ಸುಮಾರು 40 ಲಕ್ಷ ರೂ. ವೆಚ್ಚವಾಗುತ್ತದೆ ಎಂದು ನಾರಾಯಣ ಹೃದಯಾಲಯ ಬೆಂಗಳೂರು ಇವರು ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಪಾಲಕರು ವಿವಿಧ ಕಡೆಯಿಂದ ಸಾಲ ಮಾಡಿದ್ದು, ಮುಂದಿನ ಚಿಕಿತ್ಸೆಗಾಗಿ ಧನ ಸಹಾಯ ಮಾಡುವ ಮೂಲಕ ಮಗುವಿನ ಚಿಕಿತ್ಸೆಗೆ ಸಹಕರಿಸುವಂತೆ ಪೋಷಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಸಿಗಲಿದೆ ₹18,180 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ದೇಣಿಗೆ ಸಹಾಯ ಮಾಡುವ ಬಯಸುವರು ಈ ಕೆಳಗಿನ ಬ್ಯಾಂಕ್ ಖಾತೆಗೆ ಜಮಾ ಮಾಡಬಹುದಾಗಿದೆ.
PRADEEP H.C.
KARNATAKA BANK, N.R.PURA BRANCH,
SB A/C NO: 5832500100370601
IFSC : KARB0000583
Mob: 8073866152
ಮೂಡಿಗೆರೆ: ಎರಡು ವರ್ಷದ ಹಿಂದೆ ಕಳವು ಮಾಡಿದ ಆರೋಪಿ ಬಂಧನ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022 ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ಮೂಲದ ನಲ್ಕೆ ಗ್ರಾಮದ ಶರತ್ ಬಂಧಿತ ಆರೋಪಿ
ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ. ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿ ಆರೋಪಿ ಪರಾರಿಯಾಗಿದ್ದ. ನಂತರ ಕಳಸದ ಹೆಮ್ಮಕ್ಕಿಯ ತೋಟವೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಯಾವುದೇ ಮೊಬೈಲ್ ಬಳಸುತ್ತಿರಲಿಲ್ಲ. ಇತ್ತೀಚೆಗೆ ಒಂದು ಸಿಮ್ ಖರೀದಿ ಮಾಡಿದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.












