ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಜೊತೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಗುರುಪ್ರಸಾದ್ ಎನ್ನಲಾಗಿದೆ.
ಇದನ್ನೂ ಓದಿ: ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ

ಎನ್. ಆರ್. ಪುರ ತಾಲೂಕಿನ ಕಾಡಂಚಿನ ಕುಗ್ರಾಮವೊಂದರಲ್ಲಿ ಬಾಲಕಿಗೆ ಭಾನುವಾರ ವಿಪರೀತ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ವೇಳೆ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರ ಬೆಳಕಿಗೆ ಬಂದಿದೆ.

ಈ ಕುರಿತು ಬಾಲಕಿ ಬಳಿ ಕೇಳಿದಾಗ ನನ್ನನ್ನು ಪ್ರೀತಿಸುತ್ತೇನೆ, ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಹೇಳಿ ನನ್ನ ಮೇಲೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಅಲ್ಲದೆ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆಯನ್ನು ಹಾಕಿರುವುದಾಗಿ ಹೇಳಿಕೊಂಡಿದ್ದಾಳೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆ ವಿದ್ಯಾರ್ಥಿಗಳಿಗೆ 20,000 ಸ್ಕಾಲರ್ ಶಿಪ್
ಘಟನೆ ಸಂಬಂಧ ಬಾಲಕಿ ಪೋಷಕರು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: 7th ಹಾಗೂ SSLC ಪಾಸ್ ಆಗಿದ್ರು ಸಿಗುತ್ತೆ ಬ್ಯಾಂಕ್ ನಲ್ಲಿ ಕೆಲಸ; 12,000 ದಿಂದ 30,000 ಸಂಬಳ















