
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸುಂಕದಗದ್ದೆ ಸರ್ಕಾರಿ ಶಾಲೆಗೆ ನಗು ಫೌಂಡೇಶನ್ ವತಿಯಿಂದ ₹12 ಸಾವಿರ ಮೌಲ್ಯದ ಶುದ್ಧ ಕುಡಿಯುವ ನೀರಿನ ಶುದ್ಧೀಕರಣ ಯಂತ್ರ (ವಾಟರ್ ಫಿಲ್ಟರ್) ಅನ್ನು ಕೊಡುಗೆಯಾಗಿ ನೀಡಲಾಯಿತು.
ಶಾಲಾ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುತ್ತಿರುವ ನಗು ಫೌಂಡೇಶನ್ ಹಾಗೂ ದೀಪ್ತಿ ಅವರಿಗೆ ಶಾಲೆಯ ಶಿಕ್ಷಕ ಸಿ.ಆರ್. ಸುರೇಶ್ ಅವರು ಧನ್ಯವಾದಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯಗುರು ಮಮತಾ, ನಗು ಫೌಂಡೇಶನ್ ವತಿಯಿಂದ ಈಗಾಗಲೇ ಶಾಲೆಗೆ ಲಕ್ಷಕ್ಕೂ ಅಧಿಕ ಮೌಲ್ಯದ ವಿವಿಧ ಉಪಯುಕ್ತ ವಸ್ತುಗಳನ್ನು ಒದಗಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಹೇಳಿದರು.
ಶಾಲೆಯ ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನಗು ಫೌಂಡೇಶನ್ ಮಾಡುತ್ತಿರುವ ಸೇವಾ ಕಾರ್ಯಕ್ಕೆ ಎಸ್ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು ಹಾಗೂ ಸುಂಕದಗದ್ದೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. (ವರದಿ: ಶಶಿ ಬೆತ್ತದಕೊಳಲು)












