ಚಿಕ್ಕಮಗಳೂರು: ಆತ್ಮಹತ್ಯೆಗೆ ಶರಣಾದ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ತೇಗೂರು ಗ್ರಾಮದಲ್ಲಿ ನಡೆದಿದೆ. ವಿನೋದ್(24) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

 

ಇದನ್ನೂ ಓದಿ; SC, ST ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಹೆಂಡತಿ ಬಿಟ್ಟು ಹೋದಳೆಂದು ಮನನೊಂದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್ ಮನೆಯಲ್ಲಿ ಯಾರು ಇಲ್ಲದ ವೇಳೆ ಸಮಯ ನೋಡಿಕೊಂಡು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಇದನ್ನೂ ಓದಿ; ಅನರ್ಹರ ಜಮೀನು ವಶಕ್ಕೆ ಕಂದಾಯ ಇಲಾಖೆ ಸಜ್ಜು; ಒಂದು ತಿಂಗಳೊಳಗೆ ಅರ್ಜಿ ತಿರಸ್ಕೃತ

ತೇಗೂರು ಗ್ರಾಮದ ತನುಜಾ ಎಂಬ ಯುವತಿ ಹಾಗೂ ವಿನೋದ್ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಯುವತಿ ಮನೆಯವರ ಸಮ್ಮತಿ ಇರಲಿಲ್ಲ. ಹೀಗಾಗಿ ಯುವತಿ ಮನೆಯವರ ವಿರೋಧದ ನಡುವೆಯೂ ಇಬ್ಬರೂ ಓಡಿ ಹೋಗಿ ಮದುವೆಯಾಗಿದ್ದರು. ಡಿಸೆಂಬರ್ 10 ರಂದು ವಿನೋದ್ ಹಾಗೂ ತನುಜಾ ಮದುವೆಯಾಗಿದ್ದರು. ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಠಾಣೆಯಲ್ಲಿ ಪಂಚಾಯಿತಿ ನಡೆದಿದ್ದು, ಯುವತಿ ತನ್ನ ತಾಯಿ ಮನೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಾಳೆ. ಮದುವೆಯಾದ ಮೂರೇ ದಿನಕ್ಕೆ ಗಂಡನನ್ನು ಬಿಟ್ಟು ತಾಯಿ ಜೊತೆ ಹೋಗುವುದಾಗಿ ಹೇಳಿ ಯುವತಿ ಉಲ್ಟಾ ಹೊಡೆದಿದ್ದಾಳೆ.

 

ಇದನ್ನೂ ಓದಿ; ಎಲ್ಲಾ ಅಪರಾಧ ಕೃತ್ಯಗಳಿಗೂ ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸುವುದು ಸರಿಯಲ್ಲ; ಕಾಯ್ದೆಯ ದುರ್ಬಳಕೆ ತಡೆಗೆ ಹೈಕೋರ್ಟ್ ಸೂಚನೆ

ಇದರಿಂದ ಮನನೊಂದ ವಿನೋದ್ ಫೆಬ್ರವರಿ 2 ರಂದು ಆತ್ಮಹತ್ಯೆಗೆ ಯತ್ನಿಸಿದ್ದ ಕುಟುಂಬಸ್ಥರು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

ಲಂಚ ಪಡೆಯುವಾಗ ಚಿಕ್ಕಮಗಳೂರು KSRTC DC ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) 10 ಸಾವಿರ ಲಂಚ ಸ್ವೀಕರರಿಸುವ ವೇಳೆ ಇಲ್ಲಿನ ಚಿಕ್ಕಮಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಿಗೆ 10 ಸಾವಿರ ಲಂಚಕ್ಕೆ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ್ ಬೇಡಿಕೆ ಇಟ್ಟಿದ್ದ. ಹಣ ಸ್ವೀಕರಿಸುವ ವೇಳೆ ಚಿಕ್ಕಮಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇನ್ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ರಜೆ ನೀಡಲು, ಮಾರ್ಗಗಳ ಬದಲಾವಣೆ ಇತರೆ ವಿಷಯಗಳಲ್ಲಿ ಚಾಲಕರಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದ. ಅಲ್ಲದೆ, ಅಪಾರ ಪ್ರಮಾಣದಲ್ಲಿ ಲಂಚದ ಬೇಡಿಕೆ ಇಡುತ್ತಿದ್ದ ಆರೋಪ ಈತನ ಮೇಲಿತ್ತು. ದಲಿತ ನೌಕರರಿಗೆ ಕಿರುಕುಳ ಕೊಡುತ್ತಿದ್ದಾರೆ ಎಂಬ ಆರೋಪವಿದ್ದು ಈ ಬಗ್ಗೆ ಪ್ರತಿಭಟನೆ ನಡೆದು ವರ್ಗಾವಣೆಗೂ ಒತ್ತಾಯಿಸಲಾಗಿತ್ತು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.