ಶೃಂಗೇರಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಜುಲೈ 11ರಂದು ರಾಷ್ಟ್ರೀಯ ಲೋಕ್ ಅದಾಲತ್

ಶೃಂಗೇರಿ: (ನ್ಯೂಸ್‌ ಮಲ್ನಾಡ್‌ ವರದಿ) ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಆಶ್ರಯದಲ್ಲಿ ಶೃಂಗೇರಿಯ ಜೆಎಂಎಫ್‌ಸಿ (JMFC) ನ್ಯಾಯಾಲಯದ ಆವರಣದಲ್ಲಿ ಜುಲೈ 11, 2026ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.

ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ಪರಸ್ಪರ ರಾಜಿ ಮೂಲಕ ಇತ್ಯರ್ಥಪಡಿಸಬಹುದಾದ ಪ್ರಕರಣಗಳನ್ನು ತ್ವರಿತವಾಗಿ ಮತ್ತು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸಾರ್ವಜನಿಕರು ಹಾಗೂ ಕಕ್ಷಿದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಾಲೂಕು ಕಾನೂನು ಸೇವೆಗಳ ಸಮಿತಿ ಮನವಿ ಮಾಡಿದೆ.

ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಬಹುದಾದ ಪ್ರಕರಣಗಳು:
ಜಮೀನು, ಭಾಗಪತ್ರ (ವಿಭಜನೆ), ಬಾಡಿಗೆ ಹಾಗೂ ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದ ಸಿವಿಲ್ ಪ್ರಕರಣಗಳು, ಕಾನೂನಿನಡಿ ರಾಜಿ ಮಾಡಿಕೊಳ್ಳಬಹುದಾದ ಸಣ್ಣಪುಟ್ಟ ಕ್ರಿಮಿನಲ್ ಪ್ರಕರಣಗಳು, ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ (ಎನ್‌ಐ) ಕಾಯ್ದೆಯಡಿ ಚೆಕ್ ಬೌನ್ಸ್ ಪ್ರಕರಣಗಳು, ಬ್ಯಾಂಕ್ ಸಾಲ ಮರುಪಾವತಿ ಹಾಗೂ ಹಣ ವಸೂಲಾತಿ ಪ್ರಕರಣಗಳು, ವೈವಾಹಿಕ ಮತ್ತು ಜೀವನಾಂಶಕ್ಕೆ ಸಂಬಂಧಿಸಿದ ಪ್ರಕರಣಗಳು (ವಿಚ್ಛೇದನ ಹೊರತುಪಡಿಸಿ), ಮೋಟಾರು ವಾಹನ ಅಪಘಾತ ಪರಿಹಾರ (MACT) ದಾವೆಗಳು ಹಾಗೂ ವಿದ್ಯುತ್, ನೀರು, ಸಾರಿಗೆ ಮತ್ತು ದೂರವಾಣಿ ಬಿಲ್‌ಗಳಿಗೆ ಸಂಬಂಧಿಸಿದ ವಿವಾದಗಳನ್ನು ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಬಹುದಾಗಿದೆ.

ಲೋಕ್ ಅದಾಲತ್‌ನ ಪ್ರಯೋಜನಗಳು:
ಲೋಕ್ ಅದಾಲತ್‌ನಲ್ಲಿ ಯಾವುದೇ ನ್ಯಾಯಾಲಯ ಶುಲ್ಕ ಇರುವುದಿಲ್ಲ. ಈಗಾಗಲೇ ಪಾವತಿಸಿರುವ ಕೋರ್ಟ್ ಫೀ ಪ್ರಕರಣ ಇತ್ಯರ್ಥಗೊಂಡ ಬಳಿಕ ಸಂಪೂರ್ಣವಾಗಿ ಹಿಂತಿರುಗಿಸಲಾಗುತ್ತದೆ. ಪ್ರಕರಣಗಳು ಶೀಘ್ರವಾಗಿ ಇತ್ಯರ್ಥಗೊಳ್ಳುವುದರಿಂದ ಸಮಯ ಮತ್ತು ಹಣ ಉಳಿತಾಯವಾಗುತ್ತದೆ. ಅಲ್ಲದೆ, ಲೋಕ್ ಅದಾಲತ್‌ನಲ್ಲಿ ನೀಡುವ ತೀರ್ಪು ಸಿವಿಲ್ ನ್ಯಾಯಾಲಯದ ಡಿಗ್ರಿಗೆ ಸಮಾನವಾಗಿದ್ದು, ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಇದರಿಂದ ವಿವಾದಗಳಿಗೆ ಶಾಶ್ವತ ಪರಿಹಾರ ದೊರೆಯುತ್ತದೆ.

ತಮ್ಮ ಬಾಕಿ ಇರುವ ಪ್ರಕರಣಗಳನ್ನು ಲೋಕ್ ಅದಾಲತ್‌ಗೆ ಒಳಪಡಿಸಲು ಆಸಕ್ತರು ಶೀಘ್ರವೇ ಶೃಂಗೇರಿ ಜೆಎಂಎಫ್‌ಸಿ ನ್ಯಾಯಾಲಯದ ತಾಲೂಕು ಕಾನೂನು ಸೇವೆಗಳ ಸಮಿತಿ ಅಥವಾ ಸಂಬಂಧಪಟ್ಟ ವಕೀಲರನ್ನು ಸಂಪರ್ಕಿಸಿ ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳುವಂತೆ ತಾಲೂಕು ಕಾನೂನು ಸೇವೆಗಳ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.