ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪ್ರಧಾನಿ ಮೋದಿ ಪರ ದೇಶಾದ್ಯಂತ ಬೈಕ್ ಮೂಲಕ ಸಂಚಾರಿಸಿ ಪ್ರಚಾರ ಕೈಗೊಂಡಿರುವ ತಮಿಳುನಾಡಿನ ಬುಲೆಟ್ ರಾಣಿ ರಾಜಲಕ್ಷ್ಮಿ ಶುಕ್ರವಾರ ಕಾಫಿನಾಡು ಚಿಕ್ಕಮಗಳೂರಿಗೆ ಆಗಮಿಸಿದ್ದರು.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ

ತಮಿಳುನಾಡಿನ ಮಧುರೈನಿಂದ ಹೊರಟಿರುವ ಬೈಕ್ ರ್ಯಾಲಿ ಬುಲೆಟ್ ರಾಣಿ ರಾಜಲಕ್ಷ್ಮಿ ನೇತೃತ್ವದಲ್ಲಿ ಸಂಚರಿಸುತ್ತಿದೆ. 15 ರಾಜ್ಯಗಳ ಸಂಚಾರ 21 ಸಾವಿರ ಕಿಲೋಮೀಟರ್ ಕ್ರಮಿಸುವ ಗುರಿಯೊಂದಿಗೆ, 21 ಜನರ ತಂಡ ಮತ್ತೊಮ್ಮೆ ಮೋದಿ ಆಯ್ಕೆಗೆ ಸಹಕರಿಸಬೇಕೆಂದು ಪ್ರಚಾರ ಕೈಗೊಂಡಿದ್ದಾರೆ.
ಇದನ್ನೂ ಓದಿ;HAL ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಮೋದಿ ಆಡಳಿತದ ಸಾಧನೆಯೊಂದಿಗೆ ನಗರದಲ್ಲಿ ಸಂಚಾರ:
ನಗರದ ವಿವಿಧಡೆ ಸಂಚಾರಿಸಿದ ತಂಡ ಪ್ರಧಾನಿ ಮೋದಿ ಆಡಳಿತದ ಸಾಧನೆಗಳನ್ನು ಜನರಿಗೆ ತಿಳಿಸುವ ಪ್ರಯತ್ನವನ್ನು ಮಾಡಿದ್ದರು. ಈಗಾಗಲೇ 4200 ಕಿಲೋಮೀಟರ್ ಕ್ರಮಿಸಿದ್ದು, ಬೆಳಗಾವಿ ಮೂಲಕ ಮಹಾರಾಷ್ಟ್ರ, ಗೋವಾ, ಮಧ್ಯಪ್ರದೇಶ, ಉತ್ತರಪ್ರದೇಶ, ಜಾರ್ಖಂಡ್, ದೆಹಲಿ ಸಂಚರಿಸಿ 21 ಸಾವಿರ ಕಿಲೋ ಮೀಟರ್ ಕ್ರಮಿಸಿ ಏಪ್ರಿಲ್ 18 ಕ್ಕೆ ಕೊನೆಗೊಳ್ಳಲಿದೆ.
ಮುಂದುವರಿದ ಗೋ ಬ್ಯಾಕ್ ಅಭಿಯಾನ: ಶೋಭಾ ವಿರುದ್ಧ 1 ಲಕ್ಷ ನೋಟಾ ವೋಟ್ ಎಚ್ಚರಿಕೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಹಾಲಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್ ಶೋಭಕ್ಕ ಅಭಿಯಾನ ಮುಂದುವರೆದಿದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಿದರೆ ಒಂದು ಲಕ್ಷ ನೋಟಾ ವೋಟ್ ಹಾಕಲಾಗುವುದು ಎಂದು ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಸಲಾಗಿದೆ.
ಇದನ್ನೂ ಓದಿ; ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತರಬೇತಿಗೆ ಅರ್ಜಿ ಆಹ್ವಾನ
ಕಳೆದ ಬಾರಿಗಿಂತ ಹೆಚ್ಚು ಮತಗಳಲ್ಲಿ ಗೆಲ್ಲುವುದು ಖಚಿತ ಎಂದು ಯಡಿಯೂರಪ್ಪ ಅವರು ಚಿಕ್ಕಮಗಳೂರಿನಲ್ಲಿ ಹೇಳಿ ಹೋದ ನಂತರ ಒಂದು ಲಕ್ಷ ನೋಟಾ ವೋಟ್ ಹಾಕಲಾಗುವುದು ಎಂದು ಹೇಳುವ ಮೂಲಕ ಅವರಿಗೆ ಒಂದು ಲಕ್ಷ ಮತಗಳು ಕಡಿಮೆಯಾಗಲಿದೆ ಎಂಬ ಸಂದೇಶವನ್ನು ರವಾನೆ ಮಾಡಿದ್ದಾರೆ. ಮೋದಿ ಹೆಸರಿನಲ್ಲಿ ಗೆದ್ದು ಮೋದಿಯವರಿಗೆ ಕಳಂಕ ಆಗಿರುವ ಶೋಭಕ್ಕನ ವಿರುದ್ಧ ಸ್ವಚ್ಛ ಭಾರತ ಮಿಷನ್ ಪ್ರಾರಂಭ ಮಾಡಿರುವ ಸನಾತನಗಳು ನಾವು ಎಂದು ಸನಾತನ ಹಿಂದುತ್ವ ಫೇಸ್ ಬುಕ್ ಪೇಜ್ ನಲ್ಲಿ ಶೋಭಾ ಕರಂದ್ಲಾಜೆ ವಿರೋಧಿಗಳು ಹೇಳಿಕೊಂಡಿದ್ದಾರೆ. ಶೋಭಾ ಕರಂದ್ಲಾಜೆ ಮಾತ್ರ ಅಲ್ಲ, ಅವರೊಂದಿಗೆ ಗುರುತಿಸಿಕೊಂಡಿರುವ ಪಕ್ಷದ ಕಾರ್ಯಕರ್ತರ ವಿರುದ್ಧವೂ ಹರಿ ಹಾಯ್ದಿದ್ದಾರೆ.












