ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತಾಲೂಕು ಟಿಎಪಿಸಿಎಂಎಸ್ (TAPCMS) ಸೊಸೈಟಿಯ ನೂತನ ಅಧ್ಯಕ್ಷರಾಗಿ ನವೀನ್ ಕಿಗ್ಗ ಅವರು ಆಯ್ಕೆ ಆಗಿದ್ದಾರೆ.
ಶೃಂಗೇರಿ: ತಾಲೂಕು ಟಿಎಪಿಸಿಎಂಎಸ್ ಸೊಸೈಟಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯು ಇಂದು ನಡೆದಿದ್ದು, ಅಧ್ಯಕ್ಷರಾಗಿ ಬಿಜೆಪಿಯ ಅಭ್ಯರ್ಥಿ ನವೀನ್ ಕಿಗ್ಗ ಹಾಗೂ ಉಪಾಧ್ಯಕ್ಷರಾಗಿ ಪುರುಷೋತ್ತಮ್ ಹೆಗಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನವೀನ್ ಕಿಗ್ಗ ಅವರಿಗೆ ಆಡಳಿತ ಮಂಡಳಿಯ ಸದಸ್ಯರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಅಭಿನಂದನೆ ಸಲ್ಲಿಸಿ, ನೂತನ ಆಡಳಿತ ಮಂಡಳಿಯ ನೇತೃತ್ವದಲ್ಲಿ ಸೊಸೈಟಿ ಮತ್ತಷ್ಟು ಪ್ರಗತಿ ಸಾಧಿಸಲಿ ಎಂದು ಆಶಿಸಿದರು.














