ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸೋದ್ಯಮ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ರಾಜ್ಯದ ಅತಿ ಎತ್ತರದ ಶಿಖರವಾದ ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಪ್ರವಾಸಿಗರ ಪ್ರವೇಶಕ್ಕೆ ಇದೀಗ ಸಮಯ ಮಿತಿ ವಿಧಿಸಲಾಗಿದೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಅವರ ಆದೇಶದಂತೆ, ಮುಳ್ಳಯ್ಯನಗಿರಿ ತಾಣದಲ್ಲಿ ಪ್ರವಾಸಿಗರಿಗೆ ಕೇವಲ ಮೂರು ಗಂಟೆಗಳ ಕಾಲ ಮಾತ್ರ ಉಳಿಯಲು ಅವಕಾಶ ನೀಡಲಾಗಿದೆ. ಪ್ರವಾಸಿಗರ ಸಂಖ್ಯೆ ನಿಯಂತ್ರಣ ಹಾಗೂ ಪರಿಸರ ಸಂರಕ್ಷಣೆ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಪ್ರದೇಶಗಳಲ್ಲಿ ಅಡುಗೆ ಮಾಡುವುದು ಹಾಗೂ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಅರಣ್ಯ ಪ್ರದೇಶದ ವ್ಯಾಪ್ತಿಯೊಳಗೆ ಪ್ರವೇಶಿಸದಂತೆ ಪ್ರವಾಸಿಗರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಪ್ರವಾಸಿಗರಿಗೆ ಮಾಹಿತಿ ನೀಡಲು ಪ್ರವಾಸೋದ್ಯಮ ಇಲಾಖೆ ವಿವಿಧ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಿದೆ. ಇನ್ನೂ, ಪ್ರಸಿದ್ಧ ಝರಿ ಜಲಪಾತಕ್ಕೆ ಪ್ರವಾಸಿಗರು ಕಾಲ್ನಡಿಗೆಯಲ್ಲಿ ತೆರಳಲು ಮಾತ್ರ ಅನುಮತಿ ನೀಡಲಾಗಿದೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!
ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಈ ನಿಯಮಗಳು ಜಾರಿಗೊಂಡಿದ್ದು, ಪ್ರವಾಸಿಗರು ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.













