Shimogga: (ನ್ಯೂಸ್ ಮಲ್ನಾಡ್ ವರದಿ) ಅಪ್ರಾಪ್ತ ವಯಸ್ಸಿನ ಮಗನ ಕೈಗೆ ಬೈಕ್ ಕೊಟ್ಟಿದ್ದ ತಂದೆಗೆ ಶಿವಮೊಗ್ಗ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿ ಬಿಗ್ ಶಾಕ್ ನೀಡಿದೆ.

ಶಿವಮೊಗ್ಗದ (Shimogga:) ಅಶೋಕ ಹೊಟೇಲ್ ಬಳಿ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ಆಗಸ್ಟ್ 12 ರಂದು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬಾಲಕನೊಬ್ಬ ಬೈಕ್ ಚಾಲಯಿಸುತ್ತಿರುವುದು ಪತ್ತೆಯಾಗಿದೆ. ಅಪ್ರಾಪ್ತನಿಗೆ ವಾಹನ ಚಲಾಯಿಸಲು ನೀಡಿದ್ದರಿಂದ ಆತನ ತಂದೆ ವಿರುದ್ಧ ಪಶ್ಚಿಮ ಸಂಚಾರಿ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ; 10 ನಿಮಿಷದಲ್ಲೇ ರೆಡಿಯಾಗುತ್ತೆ ಈ ಸ್ಪೆಷಲ್ ತಿಂಡಿ; ನೀವ್ಯಾಕೆ ಟ್ರೈ ಮಾಡ್ಬಾರ್ದು?
ಈ ಸಂಬಂಧ 4ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಅಪ್ರಾಪ್ತನ ಕೈಗೆ ಬೈಕ್ ಚಲಾಯಿಸಲು ನೀಡಿದ ಕ್ಲಾರ್ಕ್ ಪೇಟೆಯ ಓಂ ಪ್ರಕಾಶ್‌ಗೆ 25 ಸಾವಿರ ರೂ. ದಂಡ ವಿಧಿಸಿದೆ ಎಂದು ಪೊಲೀಸ್ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ; ಭಾರತದಲ್ಲಿ UPI ಎಟಿಎಂ; ಡೆಬಿಟ್ ಕಾರ್ಡ್ ಇಲ್ಲದೆಯೇ ಸ್ಕ್ಯಾನ್ ಮೂಲಕ ಹಣ ವಿಥ್ ಡ್ರಾ ಮಾಡಿ!
Chikkamagaluru: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ, ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್‍ನಲ್ಲಿ ಬುಧವಾರ ಸಂಜೆ ನಡೆದಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-07.09.2023
ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯ ನಿರಂಜನ್(47), ಚೆನ್ನಮ್ಮ (67) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ರತ್ನಮ್ಮ ಅವರನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬುಧವಾರ ಸಂಜೆ ನಿರಂಜನ್, ಚೆನ್ನಮ್ಮ ಹಾಗೂ ರತ್ಮಮ್ಮ ಎಂಬವರು ಕಾರಿನಲ್ಲಿ ಚಿಕ್ಕಮಗಳೂರಿನಿಂದ ಕಡೂರಿಗೆ ಹೊರಟಿದ್ದು, ಈವೇಳೆ ನಗರದ ಹೊರವಲಯದಲ್ಲಿರುವ ಕಣಿವೆ ಕ್ರಾಸ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‍ಗೆ ಢಿಕ್ಕಿಯಾಗಿದೆ. ಢಿಕ್ಕಿ ರಭಸಕ್ಕೆ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದ್ದು, ಅಪಘಾತದ ರಭಸಕ್ಕೆ ನಿರಂಜನ್ ಹಾಗೂ ಚೆನಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಖರಾಯಪಟ್ಟನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು: ಶಾಲಾ ಮಕ್ಕಳ ಮೇಲೆ ಹರಿದ ಬಸ್ | ಓರ್ವ ವಿದ್ಯಾರ್ಥಿನಿ ಸಾವು, ಒಬ್ಬರು ಗಂಭೀರ
ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಚಲಿಸಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದರು, ಅದರಲ್ಲಿ ಓರ್ವ ವಿದ್ಯಾರ್ಥಿ ಇದೀಗ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ಬಳಿ ನಡೆದಿದೆ.
ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ಏಕಾಏಕಿ ಮಕ್ಕಳ ಮೇಲೆ ಹರಿದಿದೆ. ಕೂದಲೆಳೆ ಅಂತರದಲ್ಲಿ ಐವರು ಮಕ್ಕಳು ಪಾರಾಗಿದ್ದರು, ಆದರೆ ತುಳಸಿ (15) ಹಾಗೂ ನಿವೇದಿತ (14) ಸ್ಥಿತಿ ಗಂಭೀರವಾಗಿ ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾಳೆ.
ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ತುಳಸಿ, ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ಮಂಜು-ಲತಾ ದಂಪತಿಯ ಪುತ್ರಿಯಾಗಿದ್ದಾಳೆ.













