ಕಿರುತೆರೆ ನಟಿ ಶೃಂಗೇರಿ ಮಠಕ್ಕೆ ಭೇಟಿ ಕುರಿತಂತೆ ಸುಳ್ಳು ಸುದ್ದಿ ಪ್ರಕಟಿಸಿದ ಪತ್ರಿಕೆ: ಶೃಂಗೇರಿ ಶಾರದಾ ಪೀಠದಿಂದ ಸ್ಪಷ್ಟೀಕರಣ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕಿರುತೆರೆ ಖ್ಯಾತ ನಟಿ ಪಲ್ಲವಿ ಮತ್ತಿಘಟ್ಟರವರು ಶೃಂಗೇರಿ ಮಠಕ್ಕೆ ಭೇಟಿ ಸುಮಾರು 1 ಗಂಟೆಗೂ ಅಧಿಕ ಸಮಯ ಮಠದ ಹಿರಿಯ ಸ್ವಾಮಿಗಳಾದ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳ ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ವಿಶ್ವನಾಥ್ ಭಟ್ ಸಾರಥ್ಯದ ಲೋಕ ಧ್ವನಿ ಪತ್ರಿಕೆಯಲ್ಲಿ ಬಿತ್ತರಿಸಿದ ಸುದ್ದಿಗೆ ಸಂಬಂಧಿಸಿದಂತೆ ಇದೀಗ ಶೃಂಗೇರಿ ಶಾರದಾ ಪೀಠದಿಂದ ಸ್ಪಷ್ಟೀಕರಣ ನೀಡಲಾಗಿದೆ.


ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್‌ ರದ್ದು; ನಿಮ್ಮ ತಾಲೂಕಿನ ರೇಷನ್‌ ಕಾರ್ಡ್ ಡಿಲೀಟ್‌ ಆದ ಡಿಟೈಲ್ಸ್‌ ಇಲ್ಲಿದೆʼ


ಲೋಕ ಧ್ವನಿ ಇ-ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯಲ್ಲಿ ಏನಿದೆ?:
ಶೃಂಗೇರಿ: ಕನ್ನಡದ ಖ್ಯಾತ ಕಿರುತೆರೆ ನಟಿ ಪಲ್ಲವಿ ಮತ್ತಿಘಟ್ಟ ಅವರು ನಾಡಿನ ಸುಪ್ರಸಿದ್ಧ ಕ್ಷೇತ್ರವಾದ ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆಯ ಆಶೀರ್ವಾದ ಪಡೆದು, ಆನಂತರ ಶೃಂಗೇರಿ ಮಠದ ಹಿರಿಯ ಸ್ವಾಮಿಗಳಾದ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಕಳೆದ ಒಂದು ತಿಂಗಳಲ್ಲಿ ಇದು ಕಿರುತೆರೆ ನಟಿಯ ಎರಡನೇ ಭೇಟಿಯಾಗಿದ್ದು, ಈ ಬಾರಿ ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಅವರು, ಅಲ್ಲಿಯೇ ವಾಸ್ತವ್ಯ ಮಾಡಿ; ಮರುದಿನ ಶೃಂಗೇರಿ ಮಠದ ಹಿರಿಯ ಸ್ವಾಮಿಗಳನ್ನು ಭೇಟಿಯಾಗಿ ಒಂದು ಗಂಟೆಗೂ ಅಧಿಕ ಸಮಯ ಮಾತುಕತೆ ನಡೆಸಿ, ಆಶೀರ್ವಾದ ಪಡೆದಿರುವುದು ವಿಶೇಷವಾಗಿದೆ ಎಂದು ಬರೆಯಲಾಗಿದೆ.

ಈ ಕುರಿತು ಶೃಂಗೇರಿ ಶಾರದಾ ಪೀಠದಿಂದ ಸ್ಪಷ್ಟೀಕರಣ ನೀಡಿದ್ದು “ದಿನಾಂಕ 20-12-2025ನೇ ಶನಿವಾರದಂದು ಲೋಕ ಧ್ವನಿ ಎಂಬ ಇ-ಪತ್ರಿಕೆಯಲ್ಲಿ ಪಲ್ಲವಿ ಮತ್ತಿಘಟ್ಟ ಎಂಬ ಕಿರುತೆರೆ ಖ್ಯಾತ ನಟಿ ಶೃಂಗೇರಿಗೆ ಬಂದು ಶ್ರೀ ಶಾರದಾಮ್ಮನವರ ಹಾಗೂ ಜಗದ್ಗುರು ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ದರ್ಶನವನ್ನು ಪಡೆದಿರುತ್ತಾರೆ ಹಾಗೆಯೇ ಅವರು ಜಗದ್ಗುರು ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಬಳಿಯಲ್ಲಿ ಸುಮಾರು 1 ಘಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿರುವುದು ವಿಶೇಷ ಎಂಬುದಾಗಿ ಪ್ರಕಟಿಸಿರುತ್ತಾರೆ. ಎಲ್ಲರಿಗೂ ತಿಳಿದಿರುವಂತೆ ಜಗದ್ಗುರು ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರು ಇತ್ತೀಚಿನ ಕೆಲವು ವರ್ಷಗಳಿಂದ ಭಕ್ತ ಜನರಿಗೆ ಕೇವಲ ದರ್ಶನವನ್ನು ನೀಡಿ ಅನುಗ್ರಹಿಸುತ್ತಿದ್ದಾರೆಯೇ ಹೊರತು ಯಾರ ಬಳಿಯಲ್ಲೂ ದೀರ್ಘವಾಗಿ ಮಾತುಕತೆ ನಡೆಸಿರುವುದಿಲ್ಲ. ಪಲ್ಲವಿ ಮತ್ತಿಘಟ್ಟರವರು ಎಲ್ಲಾ ಭಕ್ತಾದಿಗಳಂತೆ ಶ್ರೀ ಶಾರದಾಮ್ಮನವರ ಹಾಗೂ ಶ್ರೀಶ್ರೀ ಜಗದ್ಗುರು ಮಹಾಸ್ವಾಮಿಗಳವರ ದರ್ಶನ ಪಡೆದಿರಬಹುದೇ ವಿನಃ ಇ-ಪತ್ರಿಕೆಯಲ್ಲಿ ಪ್ರಕಟಿಸಿದಂತೆ ಒಂದು ಘಂಟೆಗೂ ಹೆಚ್ಚು ಮಾತುಕತೆ ನಡೆಸಿದ್ದಾರೆ ಎನ್ನಲಾದ ವಿಷಯವು ಅಪ್ಪಟ ಸುಳ್ಳಾಗಿರುತ್ತದೆ ಎಂದು ಸ್ಪಷ್ಟೀಕರಣ ನೀಡಲಾಗಿದೆ.


ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ


ಹಾಗೆಯೇ ಮುಂದಿನ ದಿನಗಳಲ್ಲಿ ಶ್ರೀಮಠದ ಹಾಗೂ ಜಗದ್ಗುರುಗಳ ಕುರಿತಂತೆ ಇಂತಹ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದಲ್ಲಿ ಕಾನೂನಿನ ಮೊರೆ ಹೋಗುವುದು ಅನಿವಾರ್ಯವಾಗಿರುತ್ತದೆ ಎಂದು ಶಾರದಾ ಪೀಠದ ಸ್ಪಷ್ಟೀಕರಣದಲ್ಲಿ ಉಲ್ಲೇಖಿಸಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.