ಶೃಂಗೇರಿ ತಾಲೂಕು ಮಲ್ಲಾಡ್ ಗ್ರಾಮದ ಮಿನಗರಡಿಯಂತಹ ಕುಗ್ರಾಮದಿಂದ ಬಂದಿರುವ ಬುಡಕಟ್ಟು ಸಮುದಾಯದ ಸುನಂದ ಶೇಷಪ್ಪ ಅವರ ಇಬ್ಬರು ಮಕ್ಕಳಾದ ನಿಶ್ಚಿತಾ ಮತ್ತು ನಿಖಿಲ್ ಅವರು ಏಕಕಾಲಕ್ಕೆ ಅರಣ್ಯ ಇಲಾಖೆಯ ಗಸ್ತು, ಅರಣ್ಯ ಪಾಲಕರ ಹುದ್ದೆಗೆ ಆಯ್ಕೆಯಾಗಿರುವುದು ಸ್ಥಳೀಯರಿಗೆ ಹಾಗೂ ತಾಲೂಕಿನವರಿಗೆ ಹೆಮ್ಮೆಯ ಸಂಗತಿಯಾಗಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್ ಮಾಡ್ದೆ ಈ ಸುದ್ದಿ ಓದಿ

ಗ್ರಾಮೀಣ ಹಿನ್ನೆಲೆಯಲ್ಲಿದ್ದರೂ ಕ್ರೀಡಾ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆಗಳನ್ನು ಮಾಡಿರುವ ಈ ಇಬ್ಬರು, ಕಬಡ್ಡಿ ಕ್ರೀಡೆಯಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಗಮನ ಸೆಳೆದಿದ್ದಾರೆ.
2019–2020ರಲ್ಲಿ ಆಂಧ್ರ ಪ್ರದೇಶದಲ್ಲಿ ನಡೆದ ಎಸ್‌ಜಿಎಫ್‌ಐ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಅವರು, ದೆಹಲಿ ಹಾಗೂ ಮಧ್ಯ ಪ್ರದೇಶದಲ್ಲಿ ನಡೆದ Khelo India ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲೂ ಭಾಗವಹಿಸಿದ್ದರು. 2020ರಲ್ಲಿ ನಡೆದ Under-19 Girls National Kabaddi Championship ಹಾಗೂ 2022ರಲ್ಲಿ ನಡೆದ Junior Under-21 Girls National Championship ಸ್ಪರ್ಧೆಗಳಲ್ಲಿಯೂ ಭಾಗವಹಿಸಿ ತಮ್ಮ ಕ್ರೀಡಾ ಸಾಮರ್ಥ್ಯವನ್ನು ತೋರಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಹಳೆಯ ಪಹಣಿ
ಇದಲ್ಲದೆ 2023ರಲ್ಲಿ ಮೂರು ಬಾರಿ ಕುವೆಂಪು ವಿಶ್ವವಿದ್ಯಾಲಯವನ್ನು ಹಾಗೂ 2025ರಲ್ಲಿ ಎರಡು ಬಾರಿ ಬೆಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದಾರೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಡೆದ ಅನೇಕ ಓಪನ್ ಕಬಡ್ಡಿ ಟೂರ್ನಮೆಂಟ್‌ಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇವರ ಈ ಸಾಧನೆಗೆ ಗ್ರಾಮಸ್ಥರು ಹಾಗೂ ಕ್ರೀಡಾಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.












