ಎನ್.ಆರ್.ಪುರ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯಲ್ಲಿ ಅಲ್ಲಲ್ಲಿ ಧಾರಾಕಾರ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಕಾಫಿನಾಡಿಗೆ ತಂಪೆರೆದಿದೆ. ಕೊಪ್ಪ, ನರಸಿಂಹರಾಜಪುರ, ಮೂಡಿಗೆರೆ ಸುತ್ತಮುತ್ತಲು ಗುಡುಗು ಸಹಿತ ಮಳೆಯಾಗಿದೆ.


ಇದನ್ನೂ ಓದಿ: ಈ ಸರ್ಕಾರಿ ಯೋಜನೆಗೆ ಮುಗಿಬಿದ್ದ ಜನ



ಇದನ್ನೂ ಓದಿ: ನವೋದಯ ವಿದ್ಯಾಲಯ ಸಮಿತಿಯಲ್ಲಿ ಉದ್ಯೋಗ; ಬರೋಬ್ಬರಿ 1,377 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ


ಕಳೆದ ರಾತ್ರಿ ಬಾಳೆಹೊನ್ನೂರು ಸುತ್ತಮುತ್ತಾ ಗುಡುಗು, ಮಿಂಚು ಹಾಗೂ ಗಾಳಿಯ ಆರ್ಭಟ ಜೋರಾಗಿದ್ದು, ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ಕೊಪ್ಪ ರಸ್ತೆಯ ಇಸಾಕ್ ಎಂಬುವರ ಮನೆಯ ತೆಂಗಿನ ಮರಕ್ಕೆ ಮಧ್ಯರಾತ್ರಿ ಸಿಡಿಲು ಬಡಿದು ಸಂಪೂರ್ಣ ಹೊತ್ತಿ ಉರಿದಿದೆ. ತೆಂಗಿನ ಮರ ಹೊತ್ತಿ ಉರಿಯುವ ದೃಶ್ಯ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ತೀರ್ಥಹಳ್ಳಿ: ಮೂಲಭೂತ ಸೌಕರ್ಯಗಳಿಂದ ವಂಚಿತ: ಲೋಕಸಭಾ ಚುನಾವಣೆ ಬಹಿಷ್ಕಾರ

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗುಂಬೆ ಹೋಬಳಿಯ ಬಾಳೆಹಳ್ಳಿ, ಉಳುಮಡಿ ಸುರುಳಿಗದ್ದೆ, ಕಣಗುಲ್ ಈ ಗ್ರಾಮಗಳಿಗೆ ರಸ್ತೆ ಮಾರ್ಗ ಆಗುವರೆಗೂ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.

ಸುಮಾರು 40 ರಿಂದ 45 ಕುಟುಂಬಗಳು ವಾಸವಾಗಿರುವ ಈ ಗ್ರಾಮಗಳಲ್ಲಿ ಮನೆಗಳಿಗೆ ಹೋಗಲು ಸರಿಯಾದ ರಸ್ತೆ ಸಂಪರ್ಕವಿಲ್ಲ, ರಸ್ತೆ ಸರಿ ಇಲ್ಲದ ಕಾರಣ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಕೂಡ ತೊಂದರೆಯಾಗುತ್ತಿದೆ. ಹಾಗೆಯೇ ಗ್ರಾಮಕ್ಕೆ ಕರೆಂಟಿನ ವ್ಯವಸ್ಥೆ ಇದ್ದರೂ ಕೂಡ ಸರಿಯಾದ ಟಿಸಿ ಇಲ್ಲದ ಕಾರಣ ನೀರಿನ ಸಮಸ್ಯೆ ಕೂಡ ಎದುರಾಗಿದೆ.

ಕಳೆದ ಎಂಟು ತಿಂಗಳ ಹಿಂದೆ ತಲ್ಲೂರಂಗಡಿ ಕೈಮರದಿಂದ ಉಳುಮಡಿ ಹೋಗುವ ಸುಮಾರು 5 ಕಿಮೀ ರಸ್ತೆ ಕಾಮಗಾರಿ ಮಾಡಲಾಗಿತ್ತು. ಆದರೆ, ಇದೀಗ ಅಲ್ಲಲ್ಲಿ ರಸ್ತೆ ಕಿತ್ತು ಬಂದು ಕಳಪೆಯಾಗಿದೆ. ಕಾಡು ಪ್ರಾಣಿಗಳ ಸಮಸ್ಯೆ ಮತ್ತು ನೆಟ್ವರ್ಕ್ ಸಮಸ್ಯೆ ಉಂಟಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದರು ಪ್ರಯೋಜನವಾಗಿಲ್ಲ. ಈ ಪ್ರದೇಶ ನಕ್ಸಲ್ ಪೀಡಿತ ಪ್ರದೇಶಕ್ಕೆ ಒಳಪಟ್ಟಿದ್ದು, ಮೂಲಭೂತ ಸೌಕರ್ಯಗಳು ದೊರಕುತ್ತಿಲ್ಲ. ಹೀಗಾಗಿ ಚುನಾವಣೆ ಬಹಿಷ್ಕಾರ ಮಾಡುವುದರ ಮೂಲಕ ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.