
ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ನಾಗಲಾಪುರ ಗ್ರಾಮದ ಹೊಸಕೆರೆ ಎಚ್.ತಿಪ್ಪೇಸ್ವಾಮಿ(54) ಎಂಬುವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಮಹಿಳೆಯರೇ ಗಮನಿಸಿ; ಇನ್ಮುಂದೆ ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ!

ಡ್ರೈವಿಂಗ್ ಕೆಲಸ ಮಾಡಿಕೊಂಡಿದ್ದ ತಿಪ್ಪೇಸ್ವಾಮಿ ಅವರು ಮೇ 18 ರಂದು ಮನೆಯಲ್ಲಿ ಕ್ರಿಮಿನಾಶಕ ಕುಡಿದಿದ್ದರು. ತಕ್ಷಣ ಅವರ ಪತ್ನಿ ಗ್ರೇಸಿ ಅವರು ಎನ್ ಆರ್ ಪುರ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು. ವೈದ್ಯರ ಸಲಹೆ ಮೇರೆಗೆ ಶಿವಮೊಗ್ಗ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ವರ್ಷವೂ ಐದು ಗ್ಯಾರಂಟಿಗಳಿಗೆ ಹಣ ಮೀಸಲು, ಎಷ್ಟು ಗೊತ್ತಾ?
ಮೃತರ ಪತ್ನಿ ಪೊಲೀಸರಿಗೆ ನೀಡಿದ ದೂರಿನಲ್ಲಿ,ನನ್ನ ಗಂಡ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕಳೆದ 3 ತಿಂಗಳಿಂದ ಮಾನಸಿಕ ಖಾಯಿಲೆ ಜಾಸ್ತಿಯಾಗಿತ್ತು. ತಮಗೆ ಬಂದ ಖಾಯಿಲೆ ಗುಣವಾಗಲಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್; ನೇಮಕಾತಿ ಮೀಸಲಾತಿ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಆಟೋ ಪಲ್ಟಿ: ಚಾಲಕ ಸಾವು
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಆಟೋ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್-ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲಿ ನಡೆದಿದೆ. ಬಾಳೂರು ಹೋಬಳಿಯ ಮಲೆಮನೆಯ ರವಿ (28) ಮೃತ ದುರ್ದೈವಿ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸೋರಿಗೆ ಬಂತು ಮತ್ತೊಂದು ಅಪ್ಡೇಟ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಆಸ್ಪತ್ರೆಯಿಂದ ರೋಗಿಯನ್ನು ಕರೆದುಕೊಂಡು ಹೋಗಲು ತೆರಳುತ್ತಿದ್ದ ರವಿ ಬಣಕಲ್- ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಆಟೋ ಪಲ್ಟಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ರವಿಯನ್ನು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ರೈತರೇ ಗಮನಿಸಿ; ಬರಪರಿಹಾರ ಹಣದ ಕುರಿತು ಸರ್ಕಾರದಿಂದ ಮಹತ್ವದ ಸೂಚನೆ; ತಪ್ಪದೇ ಈ ಸುದ್ದಿ ಓದಿ
ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
















