ಎನ್ ಆರ್ ಪುರ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕು ಗುಬ್ಬಿಗಾ ಗ್ರಾ.ಪಂ. ಅರಳಿಕೊಪ್ಪ ಗ್ರಾಮದ ಜಯಮ್ಮ ಎಂಬುವವರ ಮನೆಯ ಕೊಟ್ಟಿಗೆ ಮೇಲೆ ಭಾರೀ ಮಳೆ ಗಾಳಿಗೆ ನೆಲಸಮವಾಗಿದೆ. ಕೊಟ್ಟಿಗೆಯಲ್ಲಿ ಜಾನುವಾರುಗಳಿಲ್ಲದೇ ಇರುವುದರಿಂದ ಯಾವುದೇ ಹಾನಿ ಸಂಭವಿಸಿಲ್ಲ. ಕೊಟ್ಟಗೆಯಲ್ಲಿದ್ದ ಬೈಕ್ ಜಖಂಗೊಂಡಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಪಿಡಿಓ ಸೀಮಾ ಹಾಗೂ ಗ್ರಾಮ ಲೆಕ್ಕಿಗ ಸುನೀಲ್ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ವರ್ಷವೂ ಐದು ಗ್ಯಾರಂಟಿಗಳಿಗೆ ಹಣ ಮೀಸಲು, ಎಷ್ಟು ಗೊತ್ತಾ?

ತಾಲ್ಲೂಕಿನ ಕೂಸ್ಗಲ್ ರಂಗನಾಥ ಸ್ವಾಮಿ ದೇವಸ್ಥಾನದ ಪಕ್ಕದ ಜಾಗದಲ್ಲಿ ಸೋಮವಾರ ರಾತ್ರಿ ಸುರಿದ ಬಾರೀ ಮಳೆಗೆ ಮಣ್ಣು ಕುಸಿದಿದೆ.
ಇದನ್ನೂ ಓದಿ: ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್; ನೇಮಕಾತಿ ಮೀಸಲಾತಿ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಆಟೋ ಪಲ್ಟಿ: ಚಾಲಕ ಸಾವು
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಆಟೋ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್-ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲಿ ನಡೆದಿದೆ. ಬಾಳೂರು ಹೋಬಳಿಯ ಮಲೆಮನೆಯ ರವಿ (28) ಮೃತ ದುರ್ದೈವಿ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸೋರಿಗೆ ಬಂತು ಮತ್ತೊಂದು ಅಪ್ಡೇಟ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಆಸ್ಪತ್ರೆಯಿಂದ ರೋಗಿಯನ್ನು ಕರೆದುಕೊಂಡು ಹೋಗಲು ತೆರಳುತ್ತಿದ್ದ ರವಿ ಬಣಕಲ್- ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲಿ ನಿಯಂತ್ರಣ ತಪ್ಪಿ ರಸ್ತೆಗೆ ಆಟೋ ಪಲ್ಟಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ರವಿಯನ್ನು ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ರೈತರೇ ಗಮನಿಸಿ; ಬರಪರಿಹಾರ ಹಣದ ಕುರಿತು ಸರ್ಕಾರದಿಂದ ಮಹತ್ವದ ಸೂಚನೆ; ತಪ್ಪದೇ ಈ ಸುದ್ದಿ ಓದಿ
ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












