
ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಮೀಸಲು ಅರಣ್ಯದಲ್ಲಿ ಎರಡು ಸಾಗವಾನಿ ಮರ ಕಳವು ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಆರಂಬಳ್ಳಿ ಬಳಿ ನಡೆದಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಆರಂಬಳ್ಳಿ ಮೀಸಲು ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದಾಗ ಮರ ಕತ್ತರಿಸಿ ಸಾಗಿಸಿರುವ ಕುರುಹು ಕಂಡುಬಂದಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.














