ಎನ್.ಆರ್ ಪುರ: ದ್ವಿಚಕ್ರ ವಾಹನ ಸವಾರರಿಗೆ ಪೊಲೀಸರಿಂದ ಜಾಗೃತಿ ಕಾರ್ಯಕ್ರಮ

ಎನ್.ಆರ್ ಪುರ: (ನ್ಯೂಸ್ ಮಲ್ನಾಡ್ ವರದಿ) ಪೊಲೀಸರು ದಂಡ ವಿಧಿಸುತ್ತಾರೆ ಎಂಬ ಭಯಕ್ಕಿಂತಲೂ ಕುಟುಂಬದ ಒಳಿತಿಗಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ ಎಂದು ಸಬ್ ಇನ್ ಸ್ಪೆಕ್ಟರ್ ನಿರಂಜನಗೌಡ ಹೇಳಿದರು.

 

ಇದನ್ನೂ ಓದಿ; 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ

ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಚಾಲಕರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾಹನ ದಟ್ಟಣೆ ಹೆಚ್ಚಿರುವ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಿ ರಸ್ತೆ ನಿಯಮಗಳ ಬಗ್ಗೆ ಅರಿವು ಮೂಡಿಸಲಾಗಿತ್ತು. ಆದರೆ, ಪರಿಸ್ಥಿತಿ ಸುಧಾರಿಸದ ಕಾರಣ ಹೆಲ್ಮೆಟ್ ಧರಿಸದೆ ಚಾಲನೆ ಮಾಡುವವರಿಗೆ 500 ದಂಡ ವಿಧಿಸಲಾಗಿದೆ. ಹೆಲ್ಮೆಟ್ ಮಾರಾಟಗಾರರನ್ನು ಕರೆಸಿ, ಸ್ಥಳದಲ್ಲೇ ಹೆಲ್ಮೆಟ್ ಕೊಡಿಸುವ ಕೆಲಸ ಮಾಡಲಾಗಿದೆ ಎಂದರು.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು

ಇನ್ನು ವರ್ಷದಲ್ಲಿ 100 ಪ್ರಕರಣಗಳು ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾದರೆ, ಅದರಲ್ಲಿ 45 ಪ್ರಕರಣಗಳು ಅಪಘಾತಕ್ಕೆ ಸಂಬಂಧಪಟ್ಟದ್ದಾಗಿರುತ್ತದೆ. ಅಪಘಾತದಿಂದ ಅಂಗವೈಕಲ್ಯ ಉಂಟಾದರೆ ಜೀವನ ಪರ್ಯಂತ ಇನ್ನೊಬ್ಬರನ್ನು ಅವಲಂಬಿಸಿ ಬದುಕುವ ಸ್ಥಿತಿ ನಿರ್ಮಾಣವಾಗುತ್ತದೆ. ಯಾವ ರೀತಿ ಮೊಬೈಲ್ ಅನ್ನು ಬಿಟ್ಟು ಮನೆಯಿಂದ ಹೊರಡುವುದಿಲ್ಲವೋ, ಅದೇ ರೀತಿ ಬೈಕ್ ನಲ್ಲಿ ಹೋಗುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು. ಯಾವುದೇ ಕಾರಣಕ್ಕೂ ಅಪ್ರಾಪ್ತ ವಯಸ್ಕರಿಗೆ ವಾಹನ ಚಾಲನೆಗೆ ಅವಕಾಶ ನೀಡಬಾರದು. ಒಂದು ವೇಳೆ ಅನಾಹುತವಾದರೆ ದೊಡ್ಡ ಮೊತ್ತದಲ್ಲಿ ದಂಡ ಪಾವತಿಸಬೇಕಾಗುತ್ತದೆ ಎಂದರು.

 

ಇದನ್ನೂ ಓದಿ; ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ

ವಿಶೇಷ ಅರಿವು ಅಭಿಯಾನದ ಅಂಗವಾಗಿ ಪಟ್ಟಣದ ಸಂತೆ ಮಾರುಕಟ್ಟೆ, ಪೊಲೀಸ್ ಠಾಣೆ ಮುಂಭಾಗ. ಹಳೇಪೇಟೆ, ಹಳೇಮಂಡಗದ್ದೆ ಸರ್ಕಲ್ ವ್ಯಾಪ್ತಿಯಲ್ಲಿ ಪೊಲೀಸರನ್ನು ನಿಯೋಜಿಸಿ ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡುತ್ತಿರುವರಿಗೆ ದಂಡ ವಿಧಿಸಿ, ಹೆಲ್ಮೆಟ್ ಖರೀದಿಸುವಂತೆ ಪ್ರೇರೆಪಿಸಲಾಯಿತು.

 

ಮೂಡಿಗೆರೆ: ಕಂಠಪೂರ್ತಿ ಕುಡಿದು ರಸ್ತೆಯ ಮದ್ಯೆ ಮಲಗಿದ ಭೂಪ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಂಠಪೂರ್ತಿ ಕುಡಿದು ರಸ್ತೆಯ ಮದ್ಯೆ ವ್ಯಕ್ತಿಯೋರ್ವ ಮಲಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರಕ್ಕೆ ಹೋಗುವ ರಸ್ತೆ ಹಳಸೆ ಗ್ರಾಮದ ತಿರುವಿನಲ್ಲಿ ನಡೆದಿದೆ.

ಇದನ್ನೂ ಓದಿ; ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ

ರಸ್ತೆಯಲ್ಲಿ ವ್ಯಕ್ತಿ ಮಲಗಿರುವುದನ್ನು ನೋಡಿ ವಾಹನ ಸವಾರರು ಬೆಚ್ಚಿ ಬಿದ್ದಿದ್ದು, ವಾಹನ ಚಾಲಕರು ಎಷ್ಟೇ ಹಾರ್ನ್ ಮಾಡಿದರೂ ಮೇಲಕ್ಕೆ ಏಳದ ಭೂಪ, ಕೆಲ ಕಾಲ ಆತಂಕ ಸೃಷ್ಟಿಸಿದ್ದಾನೆ. ವಾಹನದ ಹಾರ್ನ್ ಗೆ ಕೊನೆಗೂ ಎದ್ದ ವ್ಯಕ್ತಿ, ವಾಹನ ಹೋದ ನಂತರ ಮತ್ತೆ ಅದೇ ಜಾಗದಲ್ಲಿ ಮಲಗಿದ್ದಾನೆ. ವ್ಯಕ್ತಿಯ ಹುಚ್ಚಾಟದಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.