​ಎನ್. ಆರ್. ಪುರ: ಸೇತುವೆ ಮೇಲಿಂದ ನದಿಗೆ ಜಿಗಿದು ನರ್ಸ್ ಆತ್ಮಹತ್ಯೆ

​ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಸೇತುವೆ ಮೇಲಿಂದ ನದಿಗೆ ಜಿಗಿದು ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.‌ ಆರ್.‌ ಪುರ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಮುುತ್ತಿನಕೊಪ್ಪ ಮೂಲದ ರನ್ಯ (35) ಎಂದು ಗುರುತಿಸಲಾಗಿದೆ.


ನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!


ಇವರು ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರನ್ಯ ಅವರು ಮಡಬು ಸೇತುವೆ ಬಳಿ ಬಂದು, ದಿಢೀರನೆ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ತಕ್ಷಣವೇ ಕಾರ್ಯಾಚರಣೆ ನಡೆಸಲಾಗಿದೆ. ರನ್ಯ ಅವರ ಮೃತದೇಹವನ್ನು ನದಿಯಿಂದ ಹೊರತೆಗೆಯಲಾಗಿದೆ. ಮೃತ ರನ್ಯ ಅವರಿಗೆ ಸುಮಾರು 12 ವರ್ಷಗಳ ಹಿಂದೆ ವಿವಾಹವಾಗಿತ್ತು. ಇವರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಈ ಸಂಬಂಧ ಎನ್. ಆರ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯನ್ನು ಆರಂಭಿಸಿದ್ದಾರೆ.


ನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್‌!


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.