
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯ ಮೃತದೇಹ ನಗರದ ಹೊರವಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ರಕ್ಷಿತ್ (19) ಮೃತಪಟ್ಟ ವಿದ್ಯಾರ್ಥಿ. ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ.
ನಗರದ ಸರ್ಕಾರಿ ವೃತ್ತಿಪರ ಕಾಲೇಜಿನ ಬಾಲಕರ ವಸತಿ ನಿಲಯದಿಂದ ನ.7ರಂದು ನಾಪತ್ತೆಯಾಗಿದ್ದ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಗರದ ಹೊರ ವಲಯದಲ್ಲಿನ ಜಿಲ್ಲಾ ಪಂಚಾಯಿತಿ ಸಮೀಪದ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿಯ ಶವ ಶುಕ್ರವಾರ ಪತ್ತೆಯಾಗಿದೆ.

(ವರದಿ- ತನು ಕೊಟ್ಟಿಗೆಹಾರ)














