ಖಾಸಗಿ ಕಾರ್ಯಕ್ರಮದಲ್ಲಿ ಸರ್ಕಾರದ ಯೋಜನೆಯ ಪ್ರಚಾರಕ್ಕೆ ಆಕ್ಷೇಪ

ಇಂದು ಚಿಕ್ಕಮಗಳೂರಿನಲ್ಲಿ ಒಕ್ಕಲಿಗರ ಸಂಘದ ವತಿಯಿಂದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಶಾಸಕರು, ಸಚಿವರು, ಆದಿಚುಂಚನಗಿರಿ ಮಠದ ಸ್ವಾಮೀಜಿ ಅವರು ಸೇರಿದಂತೆ ಗಣ್ಯರು ಹಾಗೂ ವಿವಿಧ ರಾಜಕೀಯ ಪಕ್ಷದ ಸದಸ್ಯರು ಭಾಗವಹಿಸಿದ್ದರು.


ಇದನ್ನೂ ಓದಿ; ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗೆ ಕೇಂದ್ರದಿಂದ ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಆದರೆ ಕಾರ್ಯಕ್ರಮದಲ್ಲಿ ಬಾಷಣ ಮಾಡುವ ವೇಳೆ ಇಂಧನ ಸಚಿವ ಕೆ.ಜೆ ಜಾರ್ಜ್ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಯಗಳ ಕುರಿತು ಪ್ರಸ್ತಾಪಿಸಿದ್ದಕ್ಕೆ ಸ್ಥಳದಲ್ಲಿದ್ದ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಒಕ್ಕಲಿಗರ ಸಂಘದ ಕಾರ್ಯಕ್ರಮದಲ್ಲಿ ರಾಜಕೀಯ ಮೈಲೇಜ್ ತೆಗೆದುಕೊಳ್ಳುವುದು ಬೇಡ, ರಾಜಕೀಯ ಭಾಷಣವನ್ನು ಇಲ್ಲಿ ಮಾಡಬೇಡಿ ಎಂದು ಬಿಜೆಪಿ ಸದಸ್ಯರಾದ ತುಡುಕೂರು ಮಂಜು ಸೇರಿದಂತೆ ಹಲವರು ಆಕ್ರೋಶ ಹೊರಹಾಕಿ ವೇದಿಕೆ ಬಳಿ ತೆರಳಿ ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ಇಂದು ನಡೆಯಿತು.


ಇದನ್ನೂ ಓದಿ; BPL ಕಾರ್ಡ್ ಫಲಾನುಭವಿಗಳಿಗೆ ಸಿಹಿ ಸುದ್ದಿ; ಪರಿಷ್ಕರಣೆಯನ್ನು ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ


ಕೆ.ಜೆ ಜಾರ್ಜ್ ಈ ಹಿಂದೆಯೂ ಬಾಳೆಹೊನ್ನೂರು ಹಾಗೂ ಶೃಂಗೇರಿಯಲ್ಲಿ ನಡೆದ ಕೆಲವು ಖಾಸಗಿ ಕಾರ್ಯಕ್ರಮಗಳಲ್ಲಿ ಸರ್ಕಾರದ ಗ್ಯಾರೆಂಟಿ ಯೋಜನೆಯಗಳ ಪ್ರಚಾರವನ್ನು ಮಾಡಿ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ವೇಳೆ ಮಧ್ಯಪ್ರದೇಶಿಸಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಸಭಿಕರಿಗೆ ಸಮಾಧಾನ ಮಾಡಿ ಕಾರ್ಯಕ್ರಮ ಮುಂದುವರೆಸಲು ಅನುವು ಮಾಡಿದರು.


ಇದನ್ನೂ ಓದಿ; KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.