
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ವರ್ಷದ ಮೊದಲ ಸೂರ್ಯಗ್ರಹಣ ಯಾವಾಗ?; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?

ಶಾಸಕಿ ನಯನಾ ಮೋಟಮ್ಮ ಅವರ ಉಡುಪಿನ ಕುರಿತು ಇನ್‌ಸ್ಟಾಗ್ರಾಂನಲ್ಲಿ ಅವಾಚ್ಯ ಭಾಷೆಯಲ್ಲಿ ಕಮೆಂಟ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕಿ ಅವರ ವೈಯಕ್ತಿಕ ಸಹಾಯಕ (ಪಿಎ) ಪೊಲೀಸರಿಗೆ ದೂರು ಸಲ್ಲಿಸಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು.

ತನಿಖೆಯ ವೇಳೆ ಸಾಮಾಜಿಕ ಜಾಲತಾಣದ ತಾಂತ್ರಿಕ ಮಾಹಿತಿಯನ್ನು ಸಂಗ್ರಹಿಸಿದ ಪೊಲೀಸರು, ಅಶ್ಲೀಲ ಕಮೆಂಟ್ ಮಾಡಿದ ವ್ಯಕ್ತಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ರಾಮನಗರ ಮೂಲದ ಯಕ್ಷಿತ್ ರಾಜ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ: ಸೂರ್ಯನಂತೆ ಹೊಳೆಯಲಿದೆ ಈ ರಾಶಿಯರ ಅದೃಷ್ಟ!; ಯಾವ ರಾಶಿಯವರಿಗೆ ಅದೃಷ್ಟ?
















