ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಪ್ರವಾಸಿಗರಿಗೆ ಗುಡ್ ನ್ಯೂಸ್ ಎನ್ನುವಂತೆ ಜೋಗದ ಜಲಪಾತ ವೀಕ್ಷಣೆಗೆ ವಿಧಿಸಲಾಗಿದ್ದಂತ ನಿರ್ಬಂಧವನ್ನು ತೆರವುಗೊಳಿಸಲಾಗುತ್ತಿದೆ. ಮೇ.1ರಿಂದ ಜೋಗದ ಜಲಪಾತವನ್ನು ಸಾರ್ವಜನಿಕರು ವೀಕ್ಷಣೆ ಮಾಡೋದಕ್ಕೆ ಅವಕಾಶ ನೀಡಲಾಗುತ್ತಿದೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ

ಜೋಗ ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಏಪ್ರಿಲ್ 30ರ ವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಮೇ1 ರಿಂದ ಪುನರಾರಂಭಿಸಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ಜೋಗ ಜಲಪಾತದ ವೀಕ್ಷಣೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಪ್ರವೇಶವನ್ನು ಮೇ 1 ರಿಂದ ಪುನರಾರಂಭಿಸಲಾಗುತ್ತಿದೆ. ಬರೋಬ್ಬರಿ ನಾಲ್ಕು ತಿಂಗಳ ಕಾಮಗಾರಿ ಮುಕ್ತಾಯದ ನಂತರ ಮೇ 1ರಿಂದ ಜಗತ್ ಪ್ರಸಿದ್ಧ ಜೋಗ ಜಲಪಾತ ಪ್ರವಾಸಿಗರಿಗೆ ಮುಕ್ತವಾಗಲಿದೆ.
ಇದನ್ನೂ ಓದಿ: ಕಂದಾಯ ಇಲಾಖೆಯಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ
ಜಿಲ್ಲೆಯ ವಿಶ್ವ ವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿಗಳಲ್ಲಿ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯೂ ಒಂದಾಗಿರುವ ಕಾರಣ ಏ. 30 ರವರೆಗೆ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಜೋಗದಲ್ಲಿ ಪ್ರವಾಸಿಗರಿಗೆ ವೀಕ್ಷಣಾ ಗೋಪುರ, ಪಾರ್ಕಿಂಗ್, ಪ್ರವೇಶ ದ್ವಾರ ಸೇರಿದಂತೆ ಇತರೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಈ ಕಾಮಗಾರಿಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೇ 1ರಿಂದ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ಪೋಡಿ ದುರಸ್ತಿ ದಾಖಲೆ












