ಕಾಫಿನಾಡು ಚಿಕ್ಕಮಗಳೂರಿಗೆ ಪ್ರವಾಸದ ಪ್ಲಾನ್ ಮಾಡುತ್ತಿದ್ದರೆ ಈ ಮಾಹಿತಿಯನ್ನು ತಪ್ಪದೇ ತಿಳಿದುಕೊಳ್ಳಿ.
ಇದನ್ನೂ ಓದಿ: 400 ರೂಪಾಯಿಗೆ LPG, 25,000 ಉದ್ಯೋಗ ಭರವಸೆ ನೀಡಿದ ಬಿಜೆಪಿ; ಈ ಘೋಷಣೆ ಯಾರಿಗೆ ಗೊತ್ತಾ?, ಇಲ್ಲಿದೆ ಡಿಟೈಲ್ಸ್

2024 ರ ಲೋಕಸಭೆ ಚುನಾವಣೆಗೆ ಏಪ್ರಿಲ್ 26 ಶುಕ್ರವಾರದಂದು ಮತದಾನ ನಡೆಯಲಿರುವ ಕಾರಣ 25 ಮತ್ತು 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕಿಂಗ್ ಗೆ ಅವಕಾಶ ನೀಡದಂತೆ ಜಿಲ್ಲೆಯ ರೇಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಚಿಕ್ಕಮಗಳೂರು ಜಿಲ್ಲೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದು, ಚುನಾವಣೆ ದಿನದಂದೂ ರಜೆ ಇರುವ ಕಾರಣ ಮತದಾನ ಪ್ರಕ್ರಿಯೆಯಿಂದ ಹೊರಗುಳಿಯಬಾರದೆಂಬ ಉದ್ದೇಶದಿಂದ ಜಿಲ್ಲಾಡಳಿತ ಸೂಚನೆ ನೀಡಿದೆ.
ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 17ನೇ ಕಂತಿನ ಹಣ ಬಿಡುಗಡೆ ಯಾವಾಗ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ? ಹೀಗೆ ಚೆಕ್ ಮಾಡಿ
ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಜಿಲ್ಲೆಯ ಹೋಂ ಸ್ಟೆ ಹಾಗೂ ರೇಸಾರ್ಟ್ ಮಾಲೀಕರಿಗೆ ಲಿಖಿತ ಸೂಚನೆಯನ್ನು ನೀಡಿದ್ದಾರೆ. ಇದರಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಣಗಳಿಗೆ ಪ್ರವಾಸ ಹೋಗುವ ಯೋಚನೆ ನಿಮ್ಮದಾಗಿದ್ದರೆ ಅದನ್ನು ರದ್ದು ಮಾಡುವುದು ಉತ್ತಮ.
ಶೃಂಗೇರಿ: ಕ್ಯಾನ್ಸರ್ ರೋಗಿಗಳಿಗಾಗಿ ಕೇಶ ದಾನ ಮಾಡಿದ ಬಾಲಕಿ
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಪುಟ್ಟ ಬಾಲಕಿಯೊಬ್ಬಳು ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ಉದ್ದದ ಕೇಶವನ್ನು ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾಳೆ.
ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಬಿಜೆಪಿ ಠಕ್ಕರ್!; ಮೋದಿ ಕಿ ಗ್ಯಾರಂಟಿ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ರಿಲೀಸ್
4 ನೇ ತರಗತಿಯಲ್ಲಿ ಓದುತ್ತಿರುವ ಈ ಪುಟ್ಟ ಬಾಲಕಿ ಹೆಸರು ಚಿತ್ರಿಕಾ. ಪ್ರವೀಣ್ ಎಸ್ ಸಂಕ್ಲಾಪುರ ಅವರ ಮಗಳಾಗಿರುವ ಚಿತ್ರಿಕಾ, ವಿದ್ಯಾನಗರ ಶಾಲೆಯಲ್ಲಿ 4 ನೇ ತರಗತಿಯ ಓದುತ್ತಿರುವ ಈ ಬಾಲಕಿ, ಕ್ಯಾನ್ಸರ್ ರೋಗಿಗಳಿಗಾಗಿ ತಾನು ಬೆಳೆಸಿದ ಉದ್ದದ ಕೂದಲನ್ನು ದಾನ ಮಾಡಿದ್ದಾಳೆ.
ಇದನ್ನೂ ಓದಿ: ಉಚಿತ ಪಡಿತರ ಸೇರಿ ಹಲವು ಭರವಸೆ ನೀಡಿದ ಬಿಜೆಪಿ
ಕ್ಯಾನ್ಸರ್ ನಿಂದ ಕೂದಲು ಕಳೆದುಕೊಂಡು ತಲೆಗೂದಲಿಲ್ಲದೆ ಮಗುವೊಬ್ಬಳು ಯಾವ ರೀತಿಯ ಸಂಕಟ ಪಡುತ್ತಾಳೆ ಎನ್ನುವುದನ್ನು ಮನಗಂಡಿದ್ದ ಚಿತ್ರಿಕಾ, ಕ್ಯಾನ್ಸರ್ ನಿಂದಾಗಿ ತಲೆಗೂದಲು ಕಳೆದುಕೊಂಡವರಿಗೆ ದಾನವಾಗಿ ನೀಡಲು ತೀರ್ಮಾನಿಸಿ ಪುತ್ತೂರಿನ ಹೊಸ ಬೆಳಕು ಬಡವರ ಆಶಾಕಿರಣ ಸೇವಾ ಟ್ರಸ್ಟ್ ಹಾಗೂ ರಕ್ತ ಸಂಜೀವಿನಿ ಬ್ಲಡ್ ಗ್ರೂಪ್ ಮೂಲಕ ಕೂದಲನ್ನು ದಾನವಾಗಿ ನೀಡಿದ್ದಾಳೆ.
ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣಕ್ಕೆ ಬೇಕು ಪರ್ಮಿಷನ್; ಸರ್ಕಾರದ ಹೊಸ ರೂಲ್ಸ್
ಈ ಪುಟ್ಟ ಬಾಲಕಿಯ ಮಾನವೀಯತೆ ಎಲ್ಲರಿಗೂ ಮಾದರಿಯಾಗಿದೆ.












