ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ.
ದಿನಾಂಕ ಮೇ 2, 2026 ರಂದು ಬೆಳಗ್ಗೆ 6:00 ರಿಂದ ರಾತ್ರಿ 11:00 ಗಂಟೆಯವರೆಗೆ ಚಿಕ್ಕಮಗಳೂರು ನಗರದ ಐ.ಡಿ.ಎಸ್.ಜಿ ಕಾಲೇಜಿನ ಸುತ್ತಮುತ್ತಲಿನ 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಈ ಅವಧಿಯಲ್ಲಿ ಎಲ್ಲಾ ವಿಧದ ಮದ್ಯ ಅಂಗಡಿಗಳು ಮುಚ್ಚಿರಬೇಕು ಎಂದು ಸೂಚಿಸಲಾಗಿದ್ದು, ಮದ್ಯ ಹಾಗೂ ಸಂಬಂಧಿತ ಅಬಕಾರಿ ಪದಾರ್ಥಗಳ ಮಾರಾಟ, ಸಾಗಾಣಿಕೆ ಮತ್ತು ಸರಬರಾಜು ಕೂಡ ನಿರ್ಬಂಧಿತವಾಗಿರುತ್ತದೆ.
ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಂದು ದಿನ ಮಧ್ಯ ಮಾರಾಟ ಬಂದ್: ಕಾರಣವೇನು ಗೊತ್ತ..?













