ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ದ ಕಾರು, ಓರ್ವ ಸಾವು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರು ಗದ್ದೆಗೆ ಉರುಳಿ ಬಿದ್ದು, ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, 6 ಜನರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಹೊರವಲಯದ ಮೂಗ್ತಿಹಳ್ಳಿ ಸಮೀಪ ನಡೆದಿದೆ. ಚಿಕ್ಕಮಗಳೂರು ಮೂಲದ ಮೋಹಿನ್ (19) ಸ್ಥಳದಲ್ಲೇ ಮೃತಪಟ್ಟ ವಿದ್ಯಾರ್ಥಿ.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್‌ ರದ್ದು; ನಿಮ್ಮ ತಾಲೂಕಿನ ರೇಷನ್‌ ಕಾರ್ಡ್ ಡಿಲೀಟ್‌ ಆದ ಡಿಟೈಲ್ಸ್‌ ಇಲ್ಲಿದೆʼ

ಮೂಡಿಗೆರೆಯಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದವರು ಎಂಇಎಸ್ ಕಾಲೇಜಿನ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಕ್ರಿಕೆಟ್ ಆಡಲು ಮೂಡಿಗೆರೆಗೆ ತೆರಳಿದ್ದ ವಿದ್ಯಾರ್ಥಿಗಳು ಪಂದ್ಯ ಮುಗಿಸಿಕೊಂಡ ಬಳಿಕ ಕೊಟ್ಟಿಗೆಹಾರ ಸುತ್ತಮುತ್ತ ತಿರುಗಾಡಿ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಘಟನೆಯ ಮಾಹಿತಿ ಪಡೆದ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)

ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.