ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಆನ್‌ಲೈನ್‌ ಬುಕ್ಕಿಂಗ್‌ ಕಡ್ಡಾಯ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಬರುವ ಪ್ರವಾಸಿಗರು ಇನ್ಮುಂದೆ ಆನ್‌ಲೈನ್‌ನಲ್ಲಿ ಮೊದಲೇ ಬುಕ್ಕಿಂಗ್ ಮಾಡಿಕೊಂಡು ಬರಬೇಕು. ಸೆಪ್ಟೆಂಬರ್ 1ರಿಂದ (ನಾಳೆಯಿಂದ) ಈ ವ್ಯವಸ್ಥೆ ಜಾರಿಗೆ ಬರಲಿದೆ.


ಇದನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ


ಮುಳ್ಳಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಪ್ರವಾಸಿ ತಾಣಗಳಲ್ಲಿ ದಟ್ಟಣೆ ಉಂಟಾಗುತ್ತಿದ್ದು, ಇದನ್ನು ನಿಯಂತ್ರಿಸಲು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಜಿಲ್ಲಾಡಳಿತದ ವೆಬ್‌ಸೈಟ್‌ ಲಿಂಕ್ (https://chikkamagaluru.nic.in/en/tourism) ಬಳಸಿ ಶುಲ್ಕ (ಬೈಕ್‌ಗಳಿಗೆ ₹50, ಕಾರುಗಳಿಗೆ ₹100, ತೂಫಾನ್ ವಾಹನ ₹150 ಮತ್ತು ಟೆಂಪೊ ಟ್ರಾವೆಲರ್ ₹200) ಪಾವತಿಸಿ ದಿನಾಂಕ ಮತ್ತು ಸಮಯವನ್ನು ಮೊದಲೇ ಬುಕ್ಕಿಂಗ್ ಮಾಡಿಕೊಳ್ಳಬೇಕು.


ಇದನ್ನೂ ಓದಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ;  4 ಲಕ್ಷ ಸಹಾಯಧನ


ಪ್ರತಿದಿನ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆ ತನಕ ಮೊದಲ ಅವಧಿ ಮತ್ತು ಮಧ್ಯಾಹ್ನ 1ರಿಂದ ಸಂಜೆ 6 ಗಂಟೆ ತನಕ ಎರಡನೇ ಅವಧಿ ಎಂದು ಸಮಯ ನಿಗದಿ ಮಾಡಲಾಗಿದೆ. ಒಂದು ಅವಧಿಗೆ 600 ವಾಹನಗಳಿಗೆ (ದ್ವಿಚಕ್ರ ವಾಹನ/ಆಟೊರಿಕ್ಷಾ 100, ಸ್ಥಳೀಯ ಟ್ಯಾಕ್ಸಿ 100, ಟೆಂಪೊ ಟ್ರಾವೆಲರ್ 50, ತೂಫಾನ್ ವಾಹನ 50, ಪ್ರವಾಸಿಗರ ಕಾರು/ಜೀಪು/ಎಸ್‌ಯುವಿ 300) ಅವಕಾಶ ಇರಲಿದೆ ಮೊದಲು ಬುಕ್ಕಿಂಗ್ ಮಾಡಿಕೊಂಡವರಿಗೆ ಅವಕಾಶ ದೊರಕಲಿದೆ ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.