ಚಿಕ್ಕಮಗಳೂರು: ಹಸಿರು ಪಟಾಕಿಗೆ ಮಾತ್ರ ಅವಕಾಶ: ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ- ಜಿಲ್ಲಾಧಿಕಾರಿ ಮೀನಾ ನಾಗರಾಜ್

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)‌ ದೀಪಾವಳಿ ಹಬ್ಬ ಆಚರಣೆಗೆ ಮಾರಾಟ ಮಾಡಲು ದಾಸ್ತಾನು ಮಾಡಿರುವ ಪಟಾಕಿಗಳ ಗೋದಾಮು ಮತ್ತು ಮಳಿಗೆ ಪರಿಶೀಲನೆ ನಡೆಸಲು ಕಾರ್ಯಪಡೆ ರಚಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.


ಇದನ್ನೂ ಓದಿ: 10th ಹಾಗೂ PUC ಪಾಸ್‌ ಆದವರಿಗೆ ಜಾಬ್‌ ಆಫರ್; ಆಕರ್ಷಕ ಸಂಬಳ


ತಹಶೀಲ್ದಾರ್‌ಗಳ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರಸಭೆ ಆಯುಕ್ತರು, ಅಗ್ನಿ ಶಾಮಕ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚನೆ ಮಾಡಿದ್ದಾರೆ.

ಪಟಾಕಿ ಬಳಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಗೋದಾಮುಗಳಲ್ಲಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟ ಮಾಡಲು ಅವಕಾಶ ನೀಡಬಾರದು. ಕೂಡಲೇ ಪರಿಶೀಲನೆ ನಡೆಸಿ ಅಲ್ಲಿ ಹಸಿರು ಪಟಾಕಿಯಲ್ಲದೆ ಬೇರೆ ಪಟಾಕಿ ದಾಸ್ತಾನು ಮಾಡಿದ್ದರೆ ಗೋದಾಮ ಮುಟ್ಟುಗೋಲು ಹಾಕಿಕೊಳ್ಳಬೇಕು. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಜಾಗ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್; ಮುಲಾಜಿಲ್ಲದೆ ತೆರವು ಮಾಡುವಂತೆ CM ಸಿದ್ದರಾಮಯ್ಯ ಸೂಚನೆ!


ಪಟಾಕಿ ಸಿಡಿಸಲು ಸಮಯವನ್ನೂ ಸುಪ್ರೀಂ ಕೋರ್ಟ್ ನಿಗದಿ ಮಾಡಿದೆ. ಅದರಂತೆ ರಾತ್ರಿ 8 ರಿಂದ 10 ರವರೆಗೆ ಮಾತ್ರ ಅವಕಾಶ ನೀಡಬೇಕು. ಎಲ್ಲಿಯೂ ಆದೇಶ ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು ಎಂದು ಆದೇಶಿಸಿದ್ದಾರೆ.


ಇದನ್ನೂ ಓದಿ: 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಣೆ; ಏನಿರಲಿದೆ? ಆಹಾರ ಕಿಟ್’ನಲ್ಲಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.