ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ (ಬಾಳಗಡಿ) 2026-27ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೊಮೊ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ.
ಈ ಬಾರಿ ಫುಡ್ ಪ್ರೊಸೆಸಿಂಗ್ ಅಂಡ್ ಪ್ರಿಸರ್ವೇಶನ್, ಟ್ರಾವೆಲ್ ಅಂಡ್ ಟೂರಿಸಂ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಕಾಲೇಜು ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಾವಕಾಶಗಳ ಜೊತೆಗೆ ದ್ವಿತೀಯ ವರ್ಷದ ಇಂಜಿನಿಯರಿಂಗ್‌ಗೆ ಉನ್ನತ ವ್ಯಾಸಂಗದ ಅವಕಾಶವೂ ಲಭ್ಯವಿದೆ. ಸರ್ಕಾರದ ವತಿಯಿಂದ ವಿದ್ಯಾರ್ಥಿವೇತನ, ಉಚಿತ ಹಾಸ್ಟೆಲ್ ಸೌಲಭ್ಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಕಾಲೇಜು ಆಡಳಿತ ತಿಳಿಸಿದೆ.

10ನೇ ತರಗತಿ (SSLC/CBSE/ICSE) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 35 ಅಂಕಗಳೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಐಟಿಐ ಹಾಗೂ ಪಿಯುಸಿ ಸೈನ್ಸ್ ಪಾಸಾದ ವಿದ್ಯಾರ್ಥಿಗಳಿಗೆ ನೇರವಾಗಿ 3ನೇ ಸೆಮಿಸ್ಟರ್ ಪ್ರವೇಶಾವಕಾಶ ಕಲ್ಪಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಮಾಹಿತಿಗಾಗಿ 97406 12897 (ಪ್ರಾಂಶುಪಾಲರು) ಅಥವಾ 9591309402 (ಕಚೇರಿ) ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.















