ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಗರದಲ್ಲಿ ಎರಡು ದಿನ ಮಾಂಸ ಮಾರಾಟ ನಿಷೇಧಿಸಿ ಆದೇಶಿಸಲಾಗಿದೆ. ಶ್ರೀರಾಮನವಮಿ ಹಾಗೂ ಮಹಾವೀರ ಜಯಂತಿ ಹಬ್ಬಗಳ ಹಿನ್ನೆಲೆಯಲ್ಲಿ ಈ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಮಾರ್ಚ್ 27 ರಂದು ಶ್ರೀರಾಮನವಮಿ ಮತ್ತು ಮಾರ್ಚ್ 31 ರಂದು ಮಹಾವೀರ ಜಯಂತಿ ಆಚರಿಸಲಾಗುತ್ತಿದ್ದು, ಈ ಎರಡು ದಿನಗಳ ಕಾಲ ನಗರದಲ್ಲಿ ಪ್ರಾಣಿ ವಧೆ ಮಾಡುವುದು ಮತ್ತು ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಪೌರಾಯುಕ್ತ ಬಿ.ಸಿ. ಬಸವರಾಜು ಅವರು ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಸುತ್ತೋಲೆಯ ಅನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ಕೋಳಿ, ಕುರಿ, ಮೀನು ಮಾರಾಟ ಮಳಿಗೆಗಳು ಸೇರಿದಂತೆ ಎಲ್ಲಾ ಮಾಂಸಾಹಾರಿ ಹೋಟೆಲ್‌ಗಳನ್ನು ಈ ಎರಡು ದಿನಗಳ ಕಾಲ ಕಡ್ಡಾಯವಾಗಿ ಮುಚ್ಚಿರಲಿವೆ, ನಿಯಮ ಉಲ್ಲಂಘಿಸುವ ಮಾಂಸ ಮಾರಾಟಗಾರರು ಹಾಗೂ ಹೋಟೆಲ್ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೌರಾಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!













